ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್ ಕುಮಾರಸ್ವಾಮಿ

Updated on: Jun 04, 2025 | 9:30 PM

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ 11 ಜನರ ಪ್ರಾಣಹಾನಿ ಆಗಿದೆ. ಕಾಲ್ತುಳಿತಕ್ಕೆ ಸಿಲುಕಿದ ಹಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಆರ್​ಸಿಬಿ (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ (Stampede) ಸಂಭವಿಸಿದೆ. ಈ ವೇಳೆ 11 ಜನರ ಪ್ರಾಣಹಾನಿ ಆಗಿದೆ. ಕಾಲ್ತುಳಿತಕ್ಕೆ ಸಿಲುಕಿದ ಅನೇಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ‘18 ವರ್ಷಗಳ ಬಳಿಕ ಆರ್​ಸಿಬಿ ವಿಜೇತರಾದರು. ಆರ್​ಸಿಬಿ ಅಭಿಮಾನಿಗಳು ಕೋಟ್ಯಂತರ ಮಂದಿ ಇದ್ದಾರೆ. ಇಂದು ಮುಗ್ಧ ಅಭಿಮಾನಿಗಳು ಮೃತಪಟ್ಟಿದ್ದಾರೆ. ಯುವಕರೇ ಬಲಿಯಾಗಿರುವುದರಿಂದ ರಾಜ್ಯದ ಪ್ರತಿಯೊಬ್ಬರಿಗೂ ನೋವಾಗಿದೆ’ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More