ರಾಹುಲ್ ಗಾಂಧಿ ಕಟಾಕಟ್ ಅಂದ್ರೆ ಇವರು ಗೃಹಲಕ್ಷ್ಮಿ ಕಟ್ ಕಟ್ ಅಂತಾರೆ: ನಿಖಿಲ್ ವ್ಯಂಗ್ಯ

Updated on: Feb 27, 2025 | 2:57 PM

ಗೃಹಲಕ್ಷ್ಮಿ ಹಣ ಕಳೆದ ಕೆಲವು ತಿಂಗಳುಗಳಿಂದ ಬಿಡುಗಡೆಯಾಗದ ಬಗ್ಗೆ ನಿಖಿಲ್ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದಾಗ ಮಾತ್ರ ಹಣ ಬಿಡುಗಡೆ ಮಾಡುತ್ತಾರೆ. ಇಲ್ಲದಿದ್ದರೆ ಕಟ್ ಕಟ್ ಮಾಡಿ ಹಾಕುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಕೆಯನ್ನು ನೆನಪಿಸಿ ವ್ಯಂಗ್ಯವಾಡಿದರು.

ಬೆಂಗಳೂರು, ಫೆಬ್ರವರಿ 27: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಕೆಲವು ತಿಂಗಳುಗಳಿಂದ ಬಿಡುಗಡೆಯಾಗದಿರುವ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ ಸೇರಿ ಹಲವು ಯೋಜನೆಗಳ ಬಗ್ಗೆ ಮಾತು ಕೊಟ್ಟಿದ್ದರು. 2000 ಸಾವಿರ ಕೋಟಿ ರೂ. ಗೃಹ ಲಕ್ಷ್ಮಿ ಯೋಜನೆಗೆ ಮೀಸಲಿಟ್ಟು ಮಹಿಳೆಯ ಸಬಲೀಕರಣ ಮಾಡ್ತೀವಿ ಎಂದಿದ್ದರು. ಕಾಂಗ್ರೆಸ್​ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದ್ದರು. ಪ್ರತಿ ತಿಂಗಳು ಹಣವನ್ನು ವರ್ಗಾವಣೆ ಮಾಡುತ್ತೇವೆ ‘‘ಕಟಾಕಟ್’’ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ, ಈಗ ಕಟ್ ಕಟ್ ಮಾಡಿ ಹಣ ವರ್ಗಾವಣೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ