ರಂದೀಪ್ ಸುರ್ಜೇವಾಲಾ ರಾಜ್ಯದ ಸೂಪರ್ ಸಿಎಂ ಆಗಿರಬಹುದಾದ ಸಂಶಯ ಕಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಕೊಂಚ ಗಮನಿಸಿ. ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲು ಮುಖ್ಯಮಂತ್ರಿಯ ಬಳಿ ಹೋಗದೆ ರಂದೀಪ್ ಸುರ್ಜೆವಾಲಾ ಅವರಲ್ಲಿಗೆ ಹೋಗುತ್ತಿದ್ದಾರೆ, ರಾಜ್ಯದಲ್ಲಿ ಸರ್ಕಾರ ಹೇಗೆ ನಡೆಯುತ್ತಿದೆ ಅಂತ ಅರ್ಥಮಾಡಿಕೊಳ್ಳಲು ಇದಕ್ಕಿಂತ ಉದಾಹರಣೆ ಬೇಕೇ ಎಂದು ನಿಖಿಲ್ ಕುಮಾರಸ್ವಾಮಿ ಕೇಳಿದರು.
ಬಾಗಲಕೋಟೆ, ಜುಲೈ 17: ಕನ್ನಡನಾಡಿನ ಏಳೂವರೆ ಕೋಟಿ ಜನ ಸಿದ್ದರಾಮಯ್ಯನವರೇ (Siddaramaiah) ರಾಜ್ಯದ ಮುಖ್ಯಮಂತ್ರಿ ಅಂತ ಭಾವಿಸಿದ್ದರು, ಅದರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅವರು ಪದೇಪದೆ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿರುವುದನ್ನು ಮತ್ತು ಶಾಸಕರು ಅವರನ್ನು ಭೇಟಿಯಾಗುತ್ತಿರುವುದು ನೋಡಿದರೆ ಅವರೇ ರಾಜ್ಯದ ಸೂಪರ್ ಸಿಎಂ ಆಗಿದ್ದಾರೇನೋ ಎಂಬ ಸಂಶಯ ಮೂಡುತ್ತಿದೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿ ಸ್ಥಾನ ಸಂವಿಧಾನಿಕ ಹುದ್ದೆಯಾದರೂ ಸುರ್ಜೇವಾಲಾ ಅವರು ಅದನ್ನು ಜಿಪಿಎ ಮಾಡಿಕೊಂಡಿರಬಹುದು ಎಂದು ಜನಸಾಮಾನ್ಯರು ಭಾವಿಸುತ್ತಿದ್ದಾರೆ ಎಂದು ನಿಖಿಲ್ ಹೇಳಿದರು.
ಇದನ್ನೂ ಓದಿ: ಜನರೊಂದಿಗೆ ಜನತಾದಳ ಕಾರ್ಯಕ್ರಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸನ್ನು ತರುತ್ತಿದೆ: ನಿಖಿಲ್ ಕುಮಾರಸ್ವಾಮಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಸರಾ ದೀಪಾಲಂಕಾರ: ಲೈಟಿಂಗ್ಸ್ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ

ಇಂದೋರ್ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು

ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ

ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
