ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?

Updated on: Aug 12, 2025 | 9:42 PM

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದೇ ಸ್ಥಳದಲ್ಲಿ ವಿಷ್ಣು ಸಮಾಧಿ ಇರಬೇಕು ಎಂಬುದು ಫ್ಯಾನ್ಸ್ ಆಶಯವಾಗಿತ್ತು. ಆದರೆ ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಿದ್ದರಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಈ ಕುರಿತು ಎದುರಾದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ ಉತ್ತರಿಸಿದರು.

ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದೇ ಸ್ಥಳದಲ್ಲಿ ವಿಷ್ಣು ಸಮಾಧಿ (Vishnuvardhan Samadhi) ಇರಬೇಕು ಎಂಬುದು ಅಭಿಮಾನಿಗಳ ಆಶಯ ಆಗಿತ್ತು. ಆದರೆ ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಿದ್ದರಿಂದ ಅಭಿಮಾನಿಗಳಿಗೆ ನೋವಾಗಿದೆ. ಈ ಕುರಿತು ದಾವಣಗೆರೆಯಲ್ಲಿ ಎದುರಾದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಉತ್ತರಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡುವುದಾಗಿ ಅವರು ಹೇಳಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More