ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವಾಗ ಭಾವುಕರಾಗಿ ಕಣ್ಣೀರು ಹಾಕಿದ ನಿಖಿಲ್ ಕುಮಾರಸ್ವಾಮಿ
ತಾನು ಹಿಂದೆ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಜನ ವೋಟು ಹಾಕಿದರು, ಆದರೆ ರಾಜಕೀಯ ಷಡ್ಯಂತ್ರಗಳಿಗೆ ಬಲಿಯಾಗಿ ಸೋಲುಣ್ಣಬೇಕಾಯಿತು, ಸಾರ್ವಜನಿಕವಾಗಿ ಕಣ್ಣೀರು ಹಾಕಬಾರದು ಅಂತ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಿದ್ದೆ, ಆದರೆ ಭಾವೋದ್ವೇಗ ತಡೆಯಲಾಗುತ್ತಿಲ್ಲ ಎಂದು ನಿಖಿಲ್ ಹೇಳಿದರು.
ರಾಮನಗರ: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕುಟುಂಬಕ್ಕೆ ಸಾರ್ವಜನಿಕವಾಗಿ ಕಣ್ಣೀರು ಹಾಕದೆ ಯಾವ ಚುನಾವಣೆಯೂ ಪೂರ್ಣಗೊಳ್ಳುವುದಿಲ್ಲ. ಇವತ್ತು ಚನ್ನಪಟ್ಟಣದಲ್ಲಿ ಪ್ರಚಾರ ಮುಂದುವರಿಸಿದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಾನು ಯಾವ ತಪ್ಪು ಮಾಡಿದ್ದೀನೋ ಗೊತ್ತ್ತಿಲ್ಲ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಾಗಿ ಮತ್ತು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್ಡಿ ಕುಮಾರಸ್ವಾಮಿಯವರ ಮಗನಾಗಿ ಹುಟ್ಟಿದ್ದು ತಪ್ಪೇ ಎನ್ನುತ್ತಾ ಭಾವುಕರಾದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೊಡ್ಡಮಳೂರು ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ, ಮತಯಾಚನೆ
Latest Videos