ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವಾಗ ಭಾವುಕರಾಗಿ ಕಣ್ಣೀರು ಹಾಕಿದ ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 01, 2024 | 10:14 AM

ತಾನು ಹಿಂದೆ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಜನ ವೋಟು ಹಾಕಿದರು, ಆದರೆ ರಾಜಕೀಯ ಷಡ್ಯಂತ್ರಗಳಿಗೆ ಬಲಿಯಾಗಿ ಸೋಲುಣ್ಣಬೇಕಾಯಿತು, ಸಾರ್ವಜನಿಕವಾಗಿ ಕಣ್ಣೀರು ಹಾಕಬಾರದು ಅಂತ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಿದ್ದೆ, ಆದರೆ ಭಾವೋದ್ವೇಗ ತಡೆಯಲಾಗುತ್ತಿಲ್ಲ ಎಂದು ನಿಖಿಲ್ ಹೇಳಿದರು.

ರಾಮನಗರ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಸಾರ್ವಜನಿಕವಾಗಿ ಕಣ್ಣೀರು ಹಾಕದೆ ಯಾವ ಚುನಾವಣೆಯೂ ಪೂರ್ಣಗೊಳ್ಳುವುದಿಲ್ಲ. ಇವತ್ತು ಚನ್ನಪಟ್ಟಣದಲ್ಲಿ ಪ್ರಚಾರ ಮುಂದುವರಿಸಿದ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಾನು ಯಾವ ತಪ್ಪು ಮಾಡಿದ್ದೀನೋ ಗೊತ್ತ್ತಿಲ್ಲ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಾಗಿ ಮತ್ತು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್​ಡಿ ಕುಮಾರಸ್ವಾಮಿಯವರ ಮಗನಾಗಿ ಹುಟ್ಟಿದ್ದು ತಪ್ಪೇ ಎನ್ನುತ್ತಾ ಭಾವುಕರಾದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೊಡ್ಡಮಳೂರು ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ, ಮತಯಾಚನೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.