ನಿಮ್ಹಾನ್ಸ್ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ; ಆಸ್ಪತ್ರೆ ಮುಂದೆ ಕುಳಿತು ಪ್ರತಿಭಟನೆಗೆ ಮುಂದಾದ ಕುಟುಂಬಸ್ಥರು
ಝೀರೋ ಟ್ರಾಫಿಕ್ನಲ್ಲಿ ಬರ್ತಿದ್ದ ಹಿನ್ನಲೆ ಬೆಡ್ ಕಾಯ್ದಿರಿಸುವಿಕೆಗಾಗಿ ನಿಮಾನ್ಸ್ ಆಡಳಿತ ಮಂಡಳಿಗೆ ತಿಳಿಸಿದ್ದ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಅದರಂತೆ ಹಾಸನದಿಂದ ನಿಮಾನ್ಸ್ಗೆ ಕೇವಲ 1ಘಂಟೆ 40 ನಿಮಿಷದಲ್ಲಿ ಆಂಬ್ಯುಲೆನ್ಸ್ ಬಂದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿರುವ ಪುಟ್ಟ ಕಂದಮ್ಮಗೆ ಬೆಡ್ ಖಾಲಿಯಿಲ್ಲ ಎಂದು ಆಸ್ಪತ್ರೆಯ ಆವರಣದಲ್ಲಿಯೇ ನಿಲ್ಲಿಸಿದ್ದಾರೆ.
ಬೆಂಗಳೂರು, ನ.29: ನಿಮ್ಹಾನ್ಸ್ ಆಸ್ಪತ್ರೆ(Nimhans Hospital)ಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ ಹಿನ್ನಲೆ ಆಸ್ಪತ್ರೆ ಮುಂದೆ ಕುಟುಂಬಸ್ಥರು ಹಾಗೂ ಆಂಬ್ಯುಲೆನ್ಸ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. 1 ವರ್ಷದ ಮಗು, ತಾಯಿ ಕೈಯಿಂದ 10 ಅಡಿ ಮೇಲಿಂದ ಜಾರಿ ಕೆಳಗೆ ಬಿದ್ದಿತ್ತು. ಪರಿಣಾಮ ತಲೆಗೆ ತೀವ್ರವಾಗಿ ಗಾಯಗೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಪೋಷಕರು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ನಿಮಾನ್ಸ್ಗೆ ಹೋಗುವಂತೆ ಸೂಚಿಸಿದ್ದರು.
ಝೀರೋ ಟ್ರಾಫಿಕ್ನಲ್ಲಿ ಮಗು ರವಾನೆ
ಝೀರೋ ಟ್ರಾಫಿಕ್ನಲ್ಲಿ ಬರ್ತಿದ್ದ ಹಿನ್ನಲೆ ಬೆಡ್ ಕಾಯ್ದಿರಿಸುವಿಕೆಗಾಗಿ ನಿಮಾನ್ಸ್ ಆಡಳಿತ ಮಂಡಳಿಗೆ ತಿಳಿಸಿದ್ದ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಅದರಂತೆ ಹಾಸನದಿಂದ ನಿಮಾನ್ಸ್ಗೆ ಕೇವಲ 1ಘಂಟೆ 40 ನಿಮಿಷದಲ್ಲಿ ಆಂಬ್ಯುಲೆನ್ಸ್ ಬಂದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿರುವ ಪುಟ್ಟ ಕಂದಮ್ಮಗೆ ಬೆಡ್ ಖಾಲಿಯಿಲ್ಲ ಎಂದು ಆಸ್ಪತ್ರೆಯ ಆವರಣದಲ್ಲಿಯೇ ನಿಲ್ಲಿಸಿದ್ದಾರೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ಆಸ್ಪತ್ರೆ ಮುಂದೆ ಕುಳಿತು ಕುಟುಂಬಸ್ಥರು, ಆಂಬ್ಯುಲೆನ್ಸ್ ಚಾಲಕರು ಪ್ರತಿಭಟನೆ ಮುಂದಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ