ಈ ವಾರ ಒಂಭತ್ತು ಮಂದಿ ಪ್ರಮುಖರೇ ನಾಮಿನೇಟ್; ಹೊರ ಹೋಗೋದು ಯಾರು?
ಬಿಗ್ ಬಾಸ್ ಅಲ್ಲಿ ಈ ವಾರ ಪ್ರಮುಖವಾಗಿರುವ ಎಲ್ಲರೂ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರಗೆ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗ ಬಿಗ್ ಬಾಸ್ ಅಲ್ಲಿ ಈ ವಾರ 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರ ಹೋಗುವವರು ಯಾರು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.
ಬಿಗ್ ಬಾಸ್ 70 ದಿನಗಳನ್ನು ಪೂರೈಸುತ್ತಿದೆ. ಒಂದೂವರೆ ತಿಂಗಳಲ್ಲಿ ಬಿಗ್ ಬಾಸ್ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈ ವಾರ ಅನೇಕ ಪ್ರಮುಖರೇ ನಾಮಿನೇಟ್ ಆಗಿದ್ದಾರೆ. ಧ್ರುವಂತ್, ಸೂರಜ್ ಸಿಂಗ್, ರಾಶಿಕಾ ಶೆಟ್ಟಿ, ಮಾಳು ನಿಪನಾಳ, ಕಾವ್ಯಾ ಶೈವ, ಅಭಿಷೇಕ್, ಗಿಲ್ಲಿ ನಟ ಮತ್ತು ರಕ್ಷಿತಾ ಶೆಟ್ಟಿ ಅವರು ನಾಮಿನೇಟ್ ಆಗಿದ್ದಾರೆ. ಅಭಿ ಅಥವಾ ಮಾಳು ವೀಕ್ ಸ್ಪರ್ಧಿಗಳಾಗಿ ಕಾಣಿಸಿದ್ದಾರೆ. ಇವರಲ್ಲಿ ಒಬ್ಬರು ಹೊರಹೋಗಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
