ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ

Updated on: Mar 17, 2025 | 7:15 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 'ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್' ಅನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ದೂರದೃಷ್ಟಿಯ ವಿಧಾನವನ್ನು ಶ್ಲಾಘಿಸಿದ್ದಾರೆ. 'ಪಿಎಂ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್' ಬಿಡುಗಡೆ ಸಂದರ್ಭದಲ್ಲಿ ಉದ್ಯೋಗದ ದಾಖಲಾತಿಗಳನ್ನು ಹೆಚ್ಚಿಸಲು, ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲ ನೀಡಲು ಐದು ವಿಭಿನ್ನ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿ, (ಮಾರ್ಚ್ 17): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ನವದೆಹಲಿಯ ಹೊಸ ಸಂಸತ್ ಭವನದಲ್ಲಿ ‘ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್’ ಅನ್ನು ಬಿಡುಗಡೆ ಮಾಡಿದರು. ಇಂದಿನ ಯುವಕರು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ವೈವಿಧ್ಯಮಯ ಕೋರ್ಸ್‌ಗಳನ್ನು ಅನುಸರಿಸುತ್ತಿದ್ದಾರೆ. ಕೈಗಾರಿಕೆಗಳಲ್ಲಿ ಗಮನಾರ್ಹ ಬದಲಾವಣೆಗಳಾಗುತ್ತಿವೆ. ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್ ಮತ್ತು ಇತರ ಪ್ರಗತಿಗಳನ್ನು ಒಳಗೊಂಡಿವೆ ಎಂದಿರುವ ನಿರ್ಮಲಾ ಸೀತಾರಾಮನ್ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ವಿಧಾನವನ್ನು ಶ್ಲಾಘಿಸಿದರು. ‘ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್’ ಬಿಡುಗಡೆ ಸಂದರ್ಭದಲ್ಲಿ ಉದ್ಯೋಗ ದಾಖಲಾತಿಗಳನ್ನು ಹೆಚ್ಚಿಸಲು, ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲ ನೀಡಲು 5 ವಿಭಿನ್ನ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More