ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Edited By:

Updated on: Jun 13, 2026 | 12:36 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಚಿವರಿಗೆ ಗೌರವಾರ್ಪಣೆ ಮಾಡಿ ಆಶೀರ್ವದಿಸಿದರು.

ಉಡುಪಿ, ಜೂನ್ 13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಪ್ರಸಕ್ತ ಸಾಲಿನ ಪರ್ಯಾಯ ಪೀಠ ಅಲಂಕರಿಸಿರುವ ಶಿರೂರು ಮಠಕ್ಕೆ ಸಚಿವರು ಭೇಟಿ ನೀಡಿದರು. ಪರ್ಯಾಯ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಕೇಂದ್ರ ಸಚಿವರಿಗೆ ಮಠದ ವತಿಯಿಂದ ಆತ್ಮೀಯವಾಗಿ ಗೌರವಾರ್ಪಣೆ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 13, 2026 12:19 PM
Follow Us
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More