ಅಶ್ವಿನಿ ಪುನೀತ್ ರಾಜ್​ಕುಮಾರ್​​​ಗೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಸಾಂತ್ವನ

ರಾಜ್​ಕುಮಾರ ಕುಟುಂಬಕ್ಕೂ ಮಠಕ್ಕೂ ಅವಿನಾಭಾವ ಸಂಬಂಧ ಇದೆ. ಅವರು ಅಗಲಿದ ಮೇಲೆ ಪಾರ್ಥಿವ ಶರೀರ ನೋಡಿದ್ದೆವು. ಒಂದು ತಿಂಗಳ ಬಳಿಕ ಅವರ ಪತ್ನಿ ಅಶ್ವಿನಿ ಅವರನ್ನು ಭೇಟಿ ಮಾಡಿದ್ದೇನೆ ಎಂದು ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಸ್ಯಾಂಡಲ್​ವುಡ್​ ಖ್ಯಾತ ನಟ ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿರುವ ವಿಚಾರ ಇಡೀ ದಕ್ಷಿಣ ಭಾರತದ ಚಿತ್ರರಂಗಕ್ಕೆ ಶಾಕ್​ ನೀಡಿದೆ. ಪುನೀತ್ ನಿಧನ ಹೊಂದಿ ತಿಂಗಳೇ ಕಳೆದರೂ ಕುಟುಂಬದ ದುಃಖ ಕಡಿಮೆ ಆಗಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳೋಕೆ ಬೇರೆ ಚಿತ್ರರಂಗದ ಅನೇಕ ಸ್ಟಾರ್​ಗಳು, ಮಠದ ಸ್ವಾಮೀಜಿಗಳು ಆಗಮಿಸುತ್ತಿದ್ದಾರೆ. ಡಿಸೆಂಬರ್​ 1ರಂದು ಅಲ್ಲು ಅರ್ಜುನ್​ ಸಹೋದರ ಅಲ್ಲು ಸಿರೀಶ್ ಅವರು ಪುನೀತ್​ ನಿವಾಸಕ್ಕೆ ಆಗಮಿಸಿ ಸಾಂತ್ವನ ಹೇಳಿದ್ದರು. ಇಂದು (ನವೆಂಬರ್​ 2) ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುನೀತ್​ ಮನೆಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ರಾಜ್​ಕುಮಾರ್ ಕುಟುಂಬಕ್ಕೂ ಮಠಕ್ಕೂ ಅವಿನಾಭಾವ ಸಂಬಂಧ ಇದೆ. ಅವರು ಅಗಲಿದ ಮೇಲೆ ಪಾರ್ಥಿವ ಶರೀರ ನೋಡಿದ್ದೆವು. ಒಂದು ತಿಂಗಳ ಬಳಿಕ ಅವರ ಪತ್ನಿ ಅಶ್ವಿನಿ ಅವರನ್ನು ಭೇಟಿ ಮಾಡಿದ್ದೇನೆ. ಅವರ ನೋವಿನ ಸಂದರ್ಭದಲ್ಲಿ ಮಠ ಸಹಾಯಕ್ಕೆ ನಿಲ್ಲಲಿದೆ’ ಎಂದಿದ್ದಾರೆ.

ಇದನ್ನೂ ಓದಿ: ಪುನೀತ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಮದುವೆ ಫೋಟೋ ವೈರಲ್​

 ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

Click on your DTH Provider to Add TV9 Kannada