ರಾಹುಲ್ ಗಾಂಧಿಯವರೇ ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ: ಬಿಜೆಪಿ ಸಂಸದನ ಪ್ರಶ್ನೆ

Updated on: Mar 26, 2026 | 6:56 PM

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೊಡ್ಡಾದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಮೀಸಲಾತಿ ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲಿ ನಿಮ್ಮ ತಾಯಿಗೆ ಏಕೆ ಚಿಕಿತ್ಸೆ ಕೊಡಿಸುತ್ತಿದ್ದೀರ, ಏಮ್ಸ್​ನಲ್ಲಿ ಚಿಕಿತ್ಸೆ ಕೊಡಿಸಿದ್ದರೆ ನಿಮಗೆ ಶೇ.60ರಷ್ಟು ಮೀಸಲಾತಿ ಇರುವ ವೈದ್ಯರೇ ಸಿಗುತ್ತಿದ್ದರು.

ನವದೆಹಲಿ, ಮಾರ್ಚ್​ 26: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೊಡ್ಡಾದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಮೀಸಲಾತಿ ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲಿ ನಿಮ್ಮ ತಾಯಿಗೆ ಏಕೆ ಚಿಕಿತ್ಸೆ ಕೊಡಿಸುತ್ತಿದ್ದೀರ, ಏಮ್ಸ್​ನಲ್ಲಿ ಚಿಕಿತ್ಸೆ ಕೊಡಿಸಿದ್ದರೆ ನಿಮಗೆ ಶೇ.60ರಷ್ಟು ಮೀಸಲಾತಿ ಇರುವ ವೈದ್ಯರೇ ಸಿಗುತ್ತಿದ್ದರು. ನಿಮಗೆ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ಇಲ್ಲವೇ, ನಾವೆಲ್ಲರೂ ಸೋನಿಯಾ ಬೇಗ ಚೇತರಿಸಿಕೊಳ್ಳಲೆಂದೇ ಬಯಸುತ್ತೇವೆ, ಜಾರ್ಜ್ ಸೊರಸ್ ಅವರ ಮಾತು ಕೇಳಿ ಸಮಾಜವನ್ನು ವಿಭಜಿಸಲು ಯಾಕೆ ನೀವು ಪ್ರಯತ್ನಿಸುತ್ತಿದ್ದೀರಿ ಎಂದು ದುಬೆ ಪ್ರಶ್ನಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More