ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ; ಹೇಳಿದ್ದೇನು ನೋಡಿ?

Updated on: Mar 27, 2026 | 1:13 PM

ರೋಹಿತ್ ಶರ್ಮಾ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಕಷ್ಟು ಮೆಚ್ಚುಗೆ ಪಡೆದಿದೆ. ರೋಹಿತ್ ಅವರ ಫಿಟ್ನೆಸ್ ನೋಡಿ ನೀತಾ ಅಂಬಾನಿ ಅವರೇ ಶಾಕ್ ಆದರು. ಆ ಸಂದರ್ಭದ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ನೀತಾ ಅಂಬಾನಿ ಅವರು ರೋಹಿತ್ ಬಗ್ಗೆ ಮೆಚ್ಚುಗೆ ಸೂಚಿಸಿದರು.

ಟೀಂ ಇಂಡಿಯಾ ಆಟಗಾರ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ರೋಹಿತ್ ಶರ್ಮ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಬದಲಾವಣೆ. ಈ ಮೊದಲು ಅವರ ದೇಹದ ಕಾರಣಕ್ಕೆ ಟೀಕೆ ಮಾಡಲಾಗುತ್ತಿತ್ತು. ಅವರಿಗೆ ಹೊಟ್ಟೆ ಇದೆ, ವಡಾಪಾವ್ ತಿಂತಾರೆ ಎಂದೆಲ್ಲ ಟೀಕಿಸಲಾಗಿತ್ತು. ಆದರೆ, ಈಗ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಫಿಟ್ನೆಸ್​​ಗೆ ತುಂಬಾನೇ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದನ್ನು ನೋಡಿ ನೀತಾ ಅಂಬಾನಿ ಕೂಡ ಶಾಕ್ ಆಗಿದ್ದಾರೆ.

ಈಗಾಗಲೇ ಟೆಸ್ಟ್ ಹಾಗೂ ಟಿ20ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದಾರೆ. ಅವರು ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ. ಅವರು ಈಗ ತಮ್ಮ ಫಿಟ್ನೆಸ್​ ಬಗ್ಗೆ ಹೆಚ್ಚು ಗಮನ ಹರಿಸಿದಂತೆ ಕಾಣಿಸುತ್ತಿದೆ. ‘ನಿಮ್ಮನ್ನು ನೋಡಿದ್ರೆ ಯಂಗ್ ಬಾಯ್ ರೀತಿ ಕಾಣಿಸ್ತೀರಾ’ ಎಂದು ನೀತಾ ಹೇಳಿರುವ ವಿಡಿಯೋ ಗಮನ ಸೆಳೆದಿದೆ. ಐಪಿಎಲ್​ ಆರಂಭದ ಸಂದರ್ಭದಲ್ಲಿ ರೋಹಿತ್ ಪ್ರ್ಯಾಕ್ಟಿಸ್ ನಡೆಸುತ್ತಿದ್ದಾರೆ.

ಇನ್ನಷ್ಟು ಕ್ರಿಕೆಟ್​​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

 

Published on: Mar 27, 2026 12:41 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More