W,W,W.. ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
Nitish Kumar Reddy hat-trick: ಆಂಧ್ರಪ್ರದೇಶದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ತಮ್ಮ ಟಿ20 ವೃತ್ತಿಜೀವನದ ಮೊದಲ ಹ್ಯಾಟ್ರಿಕ್ ಪಡೆಯುವ ಮೂಲಕ ಗಮನ ಸೆಳೆದರು. RCB ನಾಯಕ ರಜತ್ ಪಾಟಿದಾರ್ ಸೇರಿದಂತೆ ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ತಂಡಕ್ಕೆ ರೋಮಾಂಚನ ನೀಡಿದರು.
ಆಂಧ್ರಪ್ರದೇಶದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಸೂಪರ್ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಈ ಪಂದ್ಯದಲ್ಲಿ, ನಿತೀಶ್ ತಮ್ಮ ಟಿ20 ವೃತ್ತಿಜೀವನದ ಮೊದಲ ಹ್ಯಾಟ್ರಿಕ್ ಪಡೆದರು. ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಮತ್ತು ಮಧ್ಯಪ್ರದೇಶದ ಪ್ರಮುಖ ಆಟಗಾರ ರಜತ್ ಪಾಟಿದಾರ್ ಅವರನ್ನು ಔಟ್ ಮಾಡುವ ಮೂಲಕ ನಿತೀಶ್ ಕುಮಾರ್ ರೆಡ್ಡಿ ತಮ್ಮ ಹ್ಯಾಟ್ರಿಕ್ ಪೂರ್ಣಗೊಳಿಸಿದರು.
113 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮಧ್ಯಪ್ರದೇಶ 17.3 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ತಲುಪಿ ಪಂದ್ಯವನ್ನು ಗೆದ್ದುಕೊಂಡಿತು. ಆದಾಗ್ಯೂ ಆಂಧ್ರಪ್ರದೇಶ ತಂಡದ ಪರ ಆಡುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಇನ್ನಿಂಗ್ಸ್‌ನ ಮೂರನೇ ಓವರ್‌ನ ಕೊನೆಯ ಮೂರು ಎಸೆತಗಳಲ್ಲಿ ವಿಕೆಟ್ ಪಡೆಯುವ ಮೂಲಕ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಹರ್ಷ್ ಗಾವ್ಲಿ, ಹರ್ಪ್ರೀತ್ ಸಿಂಗ್ ಮತ್ತು ಮಧ್ಯಪ್ರದೇಶದ ನಾಯಕ ರಜತ್ ಪತಿದಾರ್ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ರೆಡ್ಡಿ ಪಂದ್ಯದಲ್ಲಿ ರೋಮಾಂಚನ ಸೃಷ್ಟಿಸಿದರು.