ಕಾಲಿಗೆ ಬೀಳಲು ಬಂದ ನಿತೀಶ್​ ಕುಮಾರ್​ಗೆ ಪಿಎಂ ನರೇಂದ್ರ ಮೋದಿ ಮಾಡಿದ್ದೇನು?

|

Updated on: Jun 07, 2024 | 6:29 PM

ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ ನಂತರ ಮೋದಿ ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಅದಕ್ಕೆ ಬೇಡವೆಂದ ನರೇಂದ್ರ ಮೋದಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಬ್ಬಿಕೊಂಡು, ಕೈ ಕುಲುಕಿದರು.

ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಇಂದು (ಶುಕ್ರವಾರ) ನರೇಂದ್ರ ಮೋದಿ (Narendra Modi) ಅವರನ್ನು ಲೋಕಸಭೆಯ ನಾಯಕರಾಗಿ ಹೆಸರಿಸುವ ಪ್ರಸ್ತಾಪವನ್ನು ಬೆಂಬಲಿಸಿದ್ದಾರೆ. ಸತತ ಮೂರನೇ ಬಾರಿಗೆ ಕಮಲ ಪಾಳಯವು ಸರ್ಕಾರ ರಚಿಸಲು ಸಿದ್ಧವಾಗಿದೆ. ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರ ಹೆಸರನ್ನು ರಾಜನಾಥ್ ಸಿಂಗ್ ಪ್ರಸ್ತಾಪಿಸಿದರು. ನಂತರ ಅಮಿತ್ ಶಾ, ನಿತಿನ್ ಗಡ್ಕರಿ, ಎಚ್‌ಡಿ ಕುಮಾರಸ್ವಾಮಿ, ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಸೇರಿದಂತೆ ಎಲ್ಲಾ ಪ್ರಮುಖ ನಾಯಕರು ಪ್ರಸ್ತಾಪವನ್ನು ಬೆಂಬಲಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿಯವರ ಹೆಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲು ಎದ್ದ ನಿತೀಶ್ ಕುಮಾರ್ ಅವರಿಗೆ ತಮ್ಮ ಎದುರಿನಿಂದ ಹಾದುಹೋಗಲು ದಾರಿ ಮಾಡಿಕೊಟ್ಟರು. ಇದಕ್ಕೆ ಪ್ರತಿಯಾಗಿ, ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ ನಂತರ ಮೋದಿ ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಅದಕ್ಕೆ ಬೇಡವೆಂದ ನರೇಂದ್ರ ಮೋದಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಬ್ಬಿಕೊಂಡು, ಕೈ ಕುಲುಕಿದರು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on