AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ಸಿಕ್ಸ್, 8 ಫೋರ್: ವಿಸ್ಫೋಟಕ ಸೆಂಚುರಿ ಸಿಡಿಸಿದ ನಿತೀಶ್ ರಾಣಾ

ಬರೋಬ್ಬರಿ 15 ಸಿಕ್ಸ್, 8 ಫೋರ್: ವಿಸ್ಫೋಟಕ ಸೆಂಚುರಿ ಸಿಡಿಸಿದ ನಿತೀಶ್ ರಾಣಾ

ಝಾಹಿರ್ ಯೂಸುಫ್
|

Updated on: Aug 30, 2025 | 8:55 AM

Share

Nitish Rana Century: ಈ ಶತಕದ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ನಿತೀಶ್ ರಾಣಾ 55 ಎಸೆತಗಳಲ್ಲಿ 15 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 134 ರನ್​ ಬಾರಿಸಿದರು. ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು 17.1 ಓವರ್​ಗಳಲ್ಲಿ 202 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ನಿತೀಶ್ ರಾಣಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ 15 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ತೂಫಾನ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ವೆಸ್ಟ್ ಡೆಲ್ಲಿ ಲಯನ್ಸ್ ಹಾಗೂ ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಡೆಲ್ಲಿ ಲಯನ್ಸ್ ತಂಡದ ನಾಯಕ ನಿತೀಶ್ ರಾಣಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ಪರ ಅಮೋಲ್ ಶರ್ಮಾ (55) ಹಾಗೂ ತೇಜಸ್ವಿ ದಹಿಯಾ (60) ಅರ್ಧಶತಕ ಬಾರಿಸಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

202 ರನ್​ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಡೆಲ್ಲಿ ಲಯನ್ಸ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 21 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ಜವಾಬ್ದಾರಿಯುತ ಇನಿಂಗ್ಸ್ ಆಡಿದರು. ಅದರಲ್ಲೂ ಆಕ್ರಮಣಕಾರಿ ಬ್ಯಾಟಿಂಗ್​ನೊಂದಿಗೆ ಆರ್ಭಟಿಸಿದ ರಾಣಾ ಮೈದಾನದ ಮೂಲೆ ಮೂಲೆಗೂ ಸಿಕ್ಸ್ ಫೋರ್​ಗಳ ಸುರಿಮಳೆಗೈದರು. ಪರಿಣಾಮ ನಿತೀಶ್ ರಾಣಾ ಬ್ಯಾಟ್​ನಿಂದ ಕೇವಲ 42 ಎಸೆತಗಳಲ್ಲಿ ಶತಕ ಮೂಡಿಬಂತು.

ಈ ಶತಕದ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ನಿತೀಶ್ ರಾಣಾ 55 ಎಸೆತಗಳಲ್ಲಿ 15 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 134 ರನ್​ ಬಾರಿಸಿದರು. ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು 17.1 ಓವರ್​ಗಳಲ್ಲಿ 202 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ಡೆಲ್ಲಿ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ನಿತೀಶ್ ರಾಣಾ ಪಡೆ ಈಸ್ಟ್ ಡೆಲ್ಲಿ ರೈಡರ್ಸ್ ತಂಡವನ್ನು ಎದುರಿಸಲಿದ್ದಾರೆ.