DPLನಲ್ಲಿ ಟ್ರೋಫಿ ಎತ್ತಿ ಹಿಡಿದ ನಿತೀಶ್ ರಾಣಾ ಪಡೆ
Central Delhi Kings vs West Delhi Lions: 174 ರನ್ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಪ್ರಮುಖ ಬ್ಯಾಟರ್ಗಳು ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ನಾಯಕನಾಟವನ್ನು ಪ್ರದರ್ಶಿಸಿದರು.
ಡೆಲ್ಲಿ ಪ್ರೀಮಿಯರ್ ಲೀಗ್ನಲ್ಲಿ ನಿತೀಶ್ ರಾಣಾ ಮುಂದಾಳತ್ವದ ವೆಸ್ಟ್ ಡೆಲ್ಲಿ ಲಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ಹಾಗೂ ವೆಸ್ಟ್ ಡೆಲ್ಲಿ ಲಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ನಿತೀಶ್ ರಾಣಾ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ಪರ ಯುಗಲ್ ಸೈನಿ 48 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 65 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದರು.
174 ರನ್ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಪ್ರಮುಖ ಬ್ಯಾಟರ್ಗಳು ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ನಾಯಕನಾಟವನ್ನು ಪ್ರದರ್ಶಿಸಿದರು.
49 ಎಸೆತಗಳನ್ನು ಎದುರಿಸಿದ ನಿತೀಶ್ ರಾಣಾ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 79 ಬಾರಿಸಿ 18 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ 6 ವಿಕೆಟ್ಗಳ ಜಯ ಸಾಧಿಸಿ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ಚೊಚ್ಚಲ ಬಾರಿ ಡೆಲ್ಲಿ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ.
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

