DPLನಲ್ಲಿ ಟ್ರೋಫಿ ಎತ್ತಿ ಹಿಡಿದ ನಿತೀಶ್ ರಾಣಾ ಪಡೆ
Central Delhi Kings vs West Delhi Lions: 174 ರನ್ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಪ್ರಮುಖ ಬ್ಯಾಟರ್ಗಳು ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ನಾಯಕನಾಟವನ್ನು ಪ್ರದರ್ಶಿಸಿದರು.
ಡೆಲ್ಲಿ ಪ್ರೀಮಿಯರ್ ಲೀಗ್ನಲ್ಲಿ ನಿತೀಶ್ ರಾಣಾ ಮುಂದಾಳತ್ವದ ವೆಸ್ಟ್ ಡೆಲ್ಲಿ ಲಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ಹಾಗೂ ವೆಸ್ಟ್ ಡೆಲ್ಲಿ ಲಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ನಿತೀಶ್ ರಾಣಾ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ಪರ ಯುಗಲ್ ಸೈನಿ 48 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 65 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದರು.
174 ರನ್ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಪ್ರಮುಖ ಬ್ಯಾಟರ್ಗಳು ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ನಾಯಕನಾಟವನ್ನು ಪ್ರದರ್ಶಿಸಿದರು.
49 ಎಸೆತಗಳನ್ನು ಎದುರಿಸಿದ ನಿತೀಶ್ ರಾಣಾ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 79 ಬಾರಿಸಿ 18 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ 6 ವಿಕೆಟ್ಗಳ ಜಯ ಸಾಧಿಸಿ ವೆಸ್ಟ್ ಡೆಲ್ಲಿ ಲಯನ್ಸ್ ತಂಡವು ಚೊಚ್ಚಲ ಬಾರಿ ಡೆಲ್ಲಿ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ.
