ಚಿತ್ರರಂಗದಲ್ಲಿ ‘ಕ್ಯಾಂಡಿ ಕ್ರಶ್’ ಆಡಲು ರೆಡಿ ಆದ ಚಂದನ್-ನಿವೇದಿತಾ
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಈಗ ನಿವೇದಿತಾ ಗೌಡ ಅವರು ಚಂದನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಕ್ಯಾಂಡಿ ಕ್ರಶ್’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ನಿವೇದಿತಾ ಗೌಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Nivedita Gowda) ಅವರು ಮೊದಲ ಬಾರಿಗೆ ಭೇಟಿ ಆಗಿದ್ದು ಬಿಗ್ ಬಾಸ್ ಮನೆಯಲ್ಲಿ. ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈ ಪ್ರೀತಿಗೆ ಹೊಸ ಅರ್ಥ ನೀಡುವ ಕೆಲಸವನ್ನು ಇವರು ಮಾಡಿದರು. ಇವರು ಮದುವೆ ಆಗಿ ನಾಲ್ಕು ವರ್ಷಗಳು ಕಳೆದಿವೆ. ಇಲ್ಲಿಯವರೆಗೆ ಇವರಿಗೆ ಒಟ್ಟಿಗೆ ಸಿನಿಮಾ ಮಾಡೋ ಅವಕಾಶ ಸಿಕ್ಕಿರಲಿಲ್ಲ. ಈಗ ಚಂದನ್ ಹಾಗೂ ನಿವೇದಿತಾ ಒಟ್ಟಿಗೆ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಹೆಸರು ‘ಕ್ಯಾಂಡಿ ಕ್ರಶ್’. ಇವರು ಮದುವೆ ಆದಾಗಿನಿಂದಲೂ ಯಾವಾಗ ಒಟ್ಟಿಗೆ ಸಿನಿಮಾ ಮಾಡೋದು ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಕೊನೆಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಂತೆ ಆಗಿದೆ. ಸಿನಿಮಾ ಬಗ್ಗೆ ನಿವೇದಿತಾ ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 28, 2024 08:34 AM
Latest Videos