ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು

Updated on: Apr 05, 2025 | 10:49 AM

ಬಾಯ್ಸ್ vs ಗರ್ಲ್ಸ್ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಅವರು ಇದ್ದಾರೆ. ಅವರು ಈ ಬಾರಿ ವೇದಿಕೆ ಮೇಲೆ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆ ಕಾರಣಕ್ಕೆ ತಾವು ಇಲ್ಲಿರೋದಾಗಿ ಅವರು ಹೇಳಿದ್ದಾರೆ. ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರ ಆಟ ಗಮನ ಸೆಳೆದಿದೆ.

ನಿವೇದಿತಾ ಗೌಡ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಗಿದೆ. ಪ್ರತಿ ಹಂತದಲ್ಲೂ ತಂದೆ ಜೊತೆಗಿದ್ದರು ಎಂದು ನಿವೇದಿತಾ ಅವರು ಬಾಯ್ಸ್ vs ಗರ್ಲ್ಸ್ ರಿಯಾಲಿಟಿ ಶೋನಲ್ಲಿ ಹೇಳಿಕೊಂಡಿದ್ದಾರೆ. ನಿವೇದಿತಾ ಗೌಡ (Niveditha Gowda) ಅವರು ತಂದೆಯನ್ನು ನೆನಪಿಸಿಕೊಂಡು ಅತ್ತಿದ್ದಾರೆ. ‘ನನ್ನ ಜೀವನದಲ್ಲಿ ಇಷ್ಟೆಲ್ಲ ಆಯ್ತು. ಆಗ ನನ್ನ ಜೊತೆಗೆ ಇದ್ದಿದ್ದು ತಂದೆ. ಇಷ್ಟು ಸ್ಟ್ರಾಂಗ್ ಆಗಿರೋಕೆ ಅವರೇ ಕಾರಣ. ಏನೇ ಆದರೂ ನಿನ್ನ ಜೊತೆ ಇರ್ತೀನಿ ಎಂದು  ಹೇಳುತ್ತಾರೆ. ಇದು ಅವರಿಗೆ ನಿಜಕ್ಕೂ ಕಠಿಣ’ ಎಂದು ನಿವೇದಿತಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 05, 2025 10:42 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More