ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಆಗಿದ್ದೇನು?

Edited By:

Updated on: Jun 23, 2026 | 8:14 PM

ನಿವೇದಿತಾ ಗೌಡ ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಗೌಡ (Niveditha Gowda) ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿವೇದಿತಾ ಗೌಡ, ಕಿಶನ್ ಬಿಳಗಲಿ ಅವರಿಂದ ಗಂಭೀರವಾದ ಕಾನೂನು ಉಲ್ಲಂಘನೆ ಆಗಿದೆ. ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಗೆ ದೂರು ನೀಡಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ನವಿಲುಗಳನ್ನು ಎಲ್ಲಿ ಕೊಲ್ಲಲಾಗಿದೆ? ಯಾವ ಅಂಗಡಿಯಲ್ಲಿ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಅಂತ ದೂರು ನೀಡಿದ್ದೇನೆ. ದೂರು ನೀಡಿ ಇಷ್ಟು ದಿನ ಕಳೆದರೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ದಿನೇಶ್ ಕಲ್ಲಹಳ್ಳಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More