ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಗೆ ಹೋಗುತ್ತಿಲ್ಲ, ಅ ಪಕ್ಷದ ನಾಯಕರೇ ಬಿಜೆಪಿಗೆ ಬರಲು ತಯಾರಾಗಿದ್ದಾರೆ: ಭೈರತಿ ಬಸವರಾಜ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 31, 2022 | 1:41 PM

ಕಾಂಗ್ರೆಸ್ ಪಕ್ಷದ ಹಲವಾರು ನಾಯಕರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ, ಅವರನ್ನು ಬರಮಾಡಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಸಚಿವರು ಹೇಳಿದರು.

ದಾವಣಗೆರೆ: ಕಾಂಗ್ರೆಸ್ ತೊರದು ಬಿಜೆಪಿ ಪಕ್ಷ ಸೇರಿ ಬಸವರಾಜ ಬೊಮ್ಮಯಿ (Basavaraj Bommai) ಅವರ ಸಂಪುಟದಲ್ಲಿ ಮಂತ್ರಿಯೂ ಆಗಿರುವ ಭೈರತಿ ಬಸವರಾಜ (Byrathi Basavaraj) ಅವರಿಗೆ ಕಾಂಗ್ರೆಸ್ ಸೇರಲು ಬಿಜೆಪಿಯ ಕೆಲ ನಾಯಕರು ಹಾತೊರೆಯುತ್ತಿದ್ದಾರಲ್ಲ ಅಂತ ಕೇಳಿದ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸುತ್ತಾ ಯಾವುದೇ ಬಿಜೆಪಿ ನಾಯಕ ಕಾಂಗ್ರೆಸ್ ಸೇರುತ್ತಿಲ್ಲ ಎಂದರು. ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಮಾತಾಡಿದ ಅವರು ಅಸಲಿಗೆ, ಕಾಂಗ್ರೆಸ್ ಪಕ್ಷದ ಹಲವಾರು ನಾಯಕರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ, ಅವರನ್ನು ಬರಮಾಡಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.