ನಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಜಾತಿಗೆ ಅನ್ಯಾಯವಾಗಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

Updated on: Sep 30, 2023 | 4:58 PM

ಅವರು ಅಧಿಕಾರಿಗಳ ವಿಷಯದಲ್ಲಿ ಹಾಗೆ ಹೇಳಿರುವರೆಂದು ಪತ್ರಕರ್ತರೊಬ್ಬರು ತಿಳಿಸಿದಾಗ ತಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಸಮುದಾಯದವರಿಗೆ ಅನ್ಯಾಯವಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಡಿಜೆ ಹಳ್ಳಿ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ವರದಿಯನ್ನು ನೋಡಿಲ್ಲ, ನೋಡದೆ ಕಾಮೆಂಟ್ ಮಾಡಕ್ಕಾಗಲ್ಲ ಎಂದು ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ಸರ್ಕಾರದಲ್ಲಿ ಲಿಂಗಾಯತರಿಗೆ (Lingayat community) ಅನ್ಯಾಯವಾಗುತಿಲ್ಲ ಎಂದು ಹೇಳಿದರು. ಪಕ್ಷದ ಅತ್ಯಂತ ಹಿರಿಯ ನಾಯಕನಾಗಿರುವ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿರುವುದನ್ನು ಮುಖ್ಯಮಂತ್ರಿಗೆ ತಿಳಿಸಿದಾಗ, ಶಿವಶಂಕರಪ್ಪನವರು ಯಾವ ಆರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ; ಆದರೆ, ತಮ್ಮ ಸಂಪುಟದಲ್ಲಿ 7 ಸಚಿವರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಅಂತ ಹೇಳಿದರು. ಅವರು ಅಧಿಕಾರಿಗಳ ವಿಷಯದಲ್ಲಿ ಹಾಗೆ ಹೇಳಿರುವರೆಂದು ಪತ್ರಕರ್ತರೊಬ್ಬರು ತಿಳಿಸಿದಾಗ ತಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಸಮುದಾಯದವರಿಗೆ ಅನ್ಯಾಯವಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಡಿಜೆ ಹಳ್ಳಿ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ವರದಿಯನ್ನು ನೋಡಿಲ್ಲ, ನೋಡದೆ ಕಾಮೆಂಟ್ ಮಾಡಕ್ಕಾಗಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More