ಸ್ವಾಭಿಮಾನ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರ ವಿರೋಧವಿಲ್ಲ, ಇದು ಸಿದ್ದರಾಮಯ್ಯರ ಸಮಾರಂಭ ಅಲ್ಲ: ಲಕ್ಷ್ಮಣ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 30, 2024 | 12:12 PM

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ವಿರಸ ಹುಟ್ಟಿಸುವ ಕುತಂತ್ರವನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮಾಡುತ್ತಿದ್ದಾರೆ, ಈ ಪಕ್ಷಗಳು ಮೊದಲಿಗೆ ತಮ್ಮ ನಾಯಕರ ನಡುವಿನ ಜಗಳಗಳನ್ನು ಸರಿಮಾಡಿಕೊಳ್ಳುವ ಬದಲು ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆ ಅಂತ ಅರಿಯಲು ಹೆಚ್ಚು ಉತ್ಸುಕತೆ ತೋರುತ್ತವೆ ಎಂದು ಲಕ್ಷ್ಮಣ್ ಹೇಳಿದರು.

ಮೈಸೂರು: ಹಾಸನಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ಸ್ವಾಭಿಮಾನ ಸಮಾವೇಶಕ್ಕೆ ಯಾವುದೇ ಕಾರ್ಯಕರ್ತನ ವಿರೋಧವಿಲ್ಲ, ಕಾಂಗ್ರೆಸ್ ವತಿಯಿಂದಲೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು ಶೋಷಿತ ಸಮುದಾಯಗಳ ಒಕ್ಕೂಟ ಕೈಜೋಡಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದರು. ನಗರದಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಡಿಕೆ ಶಿವಕಮಾರ್ ಬಣದ ವಿರೋಧವಿದೆ ಅಂತ ಹೇಳುಲಾಗುತ್ತಿದೆ, ಅದರೆ ಕೆಪಿಸಿಸಿ ಅಧ್ಯಕ್ಷರೇ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ, ಇದು ಯಾವ ಕಾರಣಕ್ಕೂ ಸಿದ್ದರಾಮಯ್ಯ ಅವರ ವೈಯಕ್ತಿಕ ಕಾರ್ಯಕ್ರಮವಲ್ಲ ಎಂದು ಹೇಳುವ ಲಕ್ಷ್ಮಣ್ ಎಐಸಿಸಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ ತೊದಲುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಸೆಂಬರ್ 5ರ ಹಾಸನ ಸ್ವಾಭಿಮಾನ ಸಮಾವೇಶದ ಬಗ್ಗೆ ವಿವರಣೆ ನೀಡಿದ ಸಚಿವ ಹೆಚ್ ಸಿ ಮಹದೇವಪ್ಪ 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.