ಬಸ್ ಟಿಕೆಟ್ ದರ ಹೆಚ್ಚಳ ಮತ್ತು ಗ್ಯಾರಂಟಿ ಯೋಜನೆಗಳ ನಡುವೆ ಯಾವ ಸಂಬಂಧವೂ ಇಲ್ಲ: ಭೈರತಿ ಸುರೇಶ್
ಸಚಿನ್ ಪಾಂಚಾಳ್ ಸಾವಿನ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಮುಖಂಡರು ನಾಳೆ ಕಲಬುರಗಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಸಚಿನ್ ಸಾವಿನ ಬಗ್ಗೆ ಸರ್ಕಾರಕ್ಕೂ ಅನುಕಂಪವಿದೆ, ಅದರೆ ಪ್ರಕರಣದಲ್ಲಿ ಖರ್ಗೆ ಪಾತ್ರದ ಬಗ್ಗೆ ಯಾವ ಪುರಾವೆಯೂ ಇಲ್ಲ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದರು.
ಕಲಬುರಗಿ: ಬಸ್ ಟಿಕೆಟ್ ದರ ಹೆಚ್ಚಳ ಮತ್ತು ಗ್ಯಾರಂಟಿ ಯೋಜನೆಗಳ ನಡುವೆ ಯಾವುದೇ ಸಂಬಂಧವಿಲ್ಲ, ಗ್ಯಾರಂಟಿ ಯೋಜನೆಗಳಿಗಾಗಿ ತಮ್ಮ ಸರ್ಕಾರ ₹ 59,000 ಕೋಟಿ ತೆಗೆದಿರಿಸಿದೆ, ಬಸ್ ಪ್ರಯಾಣ ದರ ಹೆಚ್ಚಳದಿಂದ ಬೊಕ್ಕಸಕ್ಕೆ ₹ 500 ಕೋಟಿ ಹೆಚ್ಚುವರಿ ಆದಾಯ ಬರಬಹುದು, ₹ 59,000 ಕೋಟಿ ಎಲ್ಲಿ 500 ಕೋಟಿ ರೂ. ಎಲ್ಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬಸ್ ಟಿಕೆಟ್ ದರ ಹೆಚ್ಚಳ ಇದು ಮೊದಲ ಸಲವೇನೂ ಆಗುತ್ತಿಲ್ಲ, ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಾಗಿರುವುದರಿಂದ ಸ್ವಾಭಾವಿಕವಾಗೇ ಟಿಕೆಟ್ ದರಗಳಲ್ಲಿ ಏರಿಕೆ ಮಾಡಲಾಗಿದೆ ಎಂದು ಸುರೇಶ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹೆಲಿಕಾಪ್ಟರ್ನಲ್ಲಿ ಅವಸರದಿಂದ ಬಂದ ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಹೊತ್ತೊಯ್ದರು? ಕುಮಾರಸ್ವಾಮಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

