ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಸರ್ಕಾರ ಸುಗಮವಾಗಿ ನಡೆಯುತ್ತಿದೆ: ಡಿಕೆ ಶಿವಕುಮಾರ್
ಸರ್ಕಾರದಲ್ಲಿ ಯಾರ ನಡುವೆಯೂ ಭಿನ್ನಾಭಿಪ್ರಯವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಸರ್ಕಾರ ಸುಗಮವಾಗಿ ನಡೆಯುತ್ತಿದೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಸಮುದಾಯಗಳ ಜನ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ, ಅವರೆಲ್ಲರಿಗೆ ಉತ್ತಮ ಆಡಳಿತ ನೀಡುವ ಪ್ರಯತ್ನ ಮಾಡುತ್ತಿದ್ದೇವೆ ಅಂತ ಶಿವಕುಮಾರ್ ಹೇಳಿದರು.
ರಾಮನಗರ: ಪಕ್ಷದ ಹಿರಿಯ ನಾಯಕ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಲಿಂಗಾಯತ (Lingayat) ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಲ್ಲದೆ ತಮ್ಮ ಹೇಳಿಕೆ ಬದ್ಧರಾಗಿರುವುದಾಗಿ ತಿಳಿಸಿದ ಬಳಿಕ ಕಾಂಗ್ರೆಸ್ ಶಾಸಕರಲ್ಲಿ ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುತ್ತಿವೆ ಎಂಬ ವದಂತಿಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಾರಾಸಗಟು ತಳ್ಳಿಹಾಕಿದರು. ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್ ವಿಷಯವನ್ನು ಮುನ್ನೆಲೆಗೆ ತಂದು ಕೆಲ ಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ನಡೆಸಿವೆ, ಸರ್ಕಾರದಲ್ಲಿ ಯಾರ ನಡುವೆಯೂ ಭಿನ್ನಾಭಿಪ್ರಯವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಸರ್ಕಾರ ಸುಗಮವಾಗಿ ನಡೆಯುತ್ತಿದೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಸಮುದಾಯಗಳ ಜನ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ, ಅವರೆಲ್ಲರಿಗೆ ಉತ್ತಮ ಆಡಳಿತ ನೀಡುವ ಪ್ರಯತ್ನ ಮಾಡುತ್ತಿದ್ದೇವೆ ಅಂತ ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ