ಜೆಡಿಎಸ್ನೊಂದಿಗೆ ಭಿನ್ನಾಭಿಪ್ರಾಯವಿಲ್ಲ, ಕುಮಾರಸ್ವಾಮಿಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ: ಆರ್ ಅಶೋಕ
ಎರಡೂ ಪಕ್ಷಗಳ ಒಂದು ಸಮನ್ವಯ ಸಮಿತಿ ರಚಿಸಬೇಕೆಂದು ನಿಖಿಲ್ ಕುಮಾರಸ್ವಾಮಿ ಹೇಳುತ್ತಾರೆ ಮತ್ತು ಹಿರಿಯ ಬಿಜೆಪಿ ನಾಯಕ ಡಿವಿ ಸದಾನಂದಗೌಡ ಸಹ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಪ್ರತಿಭಟನೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ಮಾಡಬೇಕಾ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಣಯಿಸುತ್ತೇವೆ ಎಂದು ಅಶೋಕ ಹೇಳಿದರು.
ಬೆಂಗಳೂರು, ಏಪ್ರಿಲ್ 8: ರಾಜ್ಯ ಬಿಜೆಪಿ ಘಟಕ (state BJP unit) ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಜತೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ ಹೇಳುತ್ತಾರೆ. ಆದರೆ ತಮ್ಮ ಕಡೆಗಣಿಲಾಗುತ್ತಿದೆ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಜೆಡಿಎಸ್ ನಾಯಕರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಕುಮಾರಸ್ವಾಮಿಯವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ಅಶೋಕ ಹೇಳಿದರು. ಪ್ರತಿ ಅಧಿವೇಶನಕ್ಕೆ ಮೊದಲು ತಾವು ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಿ ಸದನದೊಳಗೆ ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವುದಾಗಿ ಅಶೋಕ ಹೇಳಿದರು.
ಇದನ್ನೂ ಓದಿ: ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಸಿಗೋವರೆಗೆ ಹೋರಾಟ, ಶಾಸಕರ ವಿರುದ್ಧ ಎಫ್ಐಅರ್ ದಾಖಲಾಗಬೇಕು: ಅಶೋಕ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

