ಯಾರಲ್ಲೂ ಗೊಂದಲವಿಲ್ಲ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿ: ಆರ್ ಅಶೋಕ

ಯಾರಲ್ಲೂ ಗೊಂದಲವಿಲ್ಲ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 15, 2023 | 2:20 PM

ರಾಜ್ಯದ ನಾಯಕರಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲರ ಮುಂದಿನ ಗುರಿ ಒಂದೇ ಆಗಿದೆ, ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲರ ಗುರಿ ಒಂದೇ, ಎಲ್ಲ 28 ಸ್ಥಾನಗಳನ್ನು ಗೆದ್ದು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನ ಮಂತ್ರಿಯಾಗಿ ಮಾಡೋದು ಎಂದು ಅಶೋಕ ಹೇಳಿದರು.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜ್ಯದ ಹಲವು ಬಿಜೆಪಿ ನಾಯಕರಲ್ಲಿ ಒಬ್ಬರಾಗಿದ್ದ ಮಾಜಿ ಸಚಿವ ಆರ್ ಅಶೋಕ (R Ashoka) ಇಂದು ಬಿವೈ ವಿಜಯೇಂದ್ರ (BY Vijayendra) ಪದಗ್ರಹಣದ ಬಳಿಕ ಮಾಧ್ಯಮ ಪ್ರತಿನಧಿಗಳೊಂದಿಗೆ ಮಾತಾಡುವಾಗ ಅತೀವ ಉತ್ಸಾಹ ಪ್ರದರ್ಶಿಸಿದರು. ವಿಜಯೇಂದ್ರ ಅವರ ಅಯ್ಕೆ ಅತ್ಯಂತ ಸಮರ್ಥನೀಯವಾಗಿದೆ, ಪಕ್ಷದ ವರಿಷ್ಠರು ಯುವ ನಾಯಕನನ್ನು ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಆಯ್ಕೆ ಮಾಡಿದ್ದು ಕಾರ್ಯಕರ್ತರಲ್ಲಿ ಸ್ಫೂರ್ತಿ ತುಂಬಿದೆ ಮತ್ತು ಯುವಕರಲ್ಲಿ ಹುಮ್ಮಸ್ಸು ಮೂಡಿಸಿದೆ ಎಂದು ಹೇಳಿದರು. ರಾಜ್ಯದ ನಾಯಕರಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲರ ಮುಂದಿನ ಗುರಿ ಒಂದೇ ಆಗಿದೆ, ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲರ ಗುರಿ ಒಂದೇ, ಎಲ್ಲ 28 ಸ್ಥಾನಗಳನ್ನು ಗೆದ್ದು ನರೇಂದ್ರ ಮೋದಿಯವರನ್ನು (PM Narendra Modi) ಮತ್ತೊಮ್ಮೆ ದೇಶದ ಪ್ರಧಾನ ಮಂತ್ರಿಯಾಗಿ ಮಾಡೋದು ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ