ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ
ಅಭಿವೃದ್ಧಿಹೀನ ಕರ್ನಾಟಕ ಸರ್ಕಾರ ತನ್ನ ಭ್ರಷ್ಟಾಚಾರ, ಆರ್ಥಿಕ ದಿವಾಳಿತನ ಮತ್ತು ಒಂದು ಸರ್ಕಾರವಾಗಿ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಾಗೇರಿ ಹೇಳಿದರು. ಪ್ರಧಾನಿ ಮೋದಿಯವರಿಗೆ ಎಲ್ಲವೂ ಗೊತ್ತಿದೆ, ಕರ್ನಾಟಕ ಸರ್ಕಾರ ತನ್ನ ಪ್ರವೃತ್ತಿಯಿಂದ ಜನರನ್ನು ಮರಳು ಮಾಡುವುದು ಸಾಧ್ಯವಿಲ್ಲ ಎಂದು ಸಂಸದ ಹೇಳಿದರು.
ಕಾರವಾರ, ಜೂನ್ 10: ನರೇಂದ್ರ ಮೋದಿಯವರು (PM Narendra Modi) ದೇಶದ ಪ್ರಧಾನ ಮಂತ್ರಿಯಾಗಿ 11 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅನುದಾನ ಹಂಚಿಕೆಯಲ್ಲಿ ಹಣಕಾಸು ಆಯೋಗ ಮತ್ತು ಕೇಂದ್ರ ಸರ್ಕಾರದಿಂದ ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ಯಾವುದೇ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಯಲ್ಲಿ ಕರ್ನಾಟಕ ಸಂಸದರು ಮತ್ತು ರಾಜ್ಯಸಭಾ ಸದಸ್ಯರ ಸಭೆಯಲ್ಲಿ ನಡೆಸಿದಾಗ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವಿಷಯವನ್ನು ಎಲ್ಲರಿಗೂ ಮನದಟ್ಟು ಮಾಡಿದ್ದಾರೆ ಎಂದು ಕಾಗೇರಿ ಹೇಳಿದರು.
ಇದನ್ನೂ ಓದಿ: ಮುಡಾ ಹಗರಣದಲ್ಲಿ 100 ಕೋಟಿ ಆಸ್ತಿ ಜಪ್ತಿ: ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ