ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಐಸಿಎಂಆರ್
ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ(Heart Attack) ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ(ಐಸಿಎಂಆರ್) ಸ್ಪಷ್ಟಪಡಿಸಿದೆ. ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು.
ನವದೆಹಲಿ, ಜುಲೈ 02: ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ(Heart Attack) ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ(ಐಸಿಎಂಆರ್) ಸ್ಪಷ್ಟಪಡಿಸಿದೆ. ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು.
ಹೀಗಾಗಿ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

