ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಐಸಿಎಂಆರ್

Updated on: Jul 02, 2025 | 12:58 PM

ಕರ್ನಾಟಕದಲ್ಲಿ ಸಂಭವಿಸುತ್ತಿರುವ  ಹೃದಯಾಘಾತ(Heart Attack) ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ(ಐಸಿಎಂಆರ್​) ಸ್ಪಷ್ಟಪಡಿಸಿದೆ. ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು.

ನವದೆಹಲಿ, ಜುಲೈ 02: ಕರ್ನಾಟಕದಲ್ಲಿ ಸಂಭವಿಸುತ್ತಿರುವ  ಹೃದಯಾಘಾತ(Heart Attack) ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ(ಐಸಿಎಂಆರ್​) ಸ್ಪಷ್ಟಪಡಿಸಿದೆ. ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು.

ಹೀಗಾಗಿ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More