ಸಚಿನ್ ಪ್ರಕರಣದಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ, ರಾಜೀನಾಮೆ ಯಾಕೆ ನೀಡಬೇಕು? ಸಿದ್ದರಾಮಯ್ಯ
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಕರಣದಲ್ಲಿ ಗುತ್ತಿಗೆದಾರ ಸಂತೋಷ್ ತನ್ನ ಡೆತ್ನೋಟ್ನಲ್ಲಿ ಆಗ ಮಿನಿಸ್ಟ್ರಾಗಿದ್ದ ಈಶ್ವರಪ್ಪನವರ ಹೆಸರು ಬರೆದಿದ್ದ ಎಂದ ಸಿಎಂ, ಸಚಿನ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅವಶ್ಯಕತೆಯೂ ಇಲ್ಲ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ, ಹಾಗಾಗಿ ಸಚಿನ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಕೇಳುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ ಎಂದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಸ್ತ, ಕನ್ನಡಿಗರಿಗೆ, ದೇಶದ ನಿವಾಸಿ ಮತ್ತು ಮಾಧ್ಯಮದವರಿಗೆ ಹೊಸವರ್ಷದ ಶುಭಾಷಯಗಳನ್ನು ತಿಳಿಸಿದರು. ಮುಂದುವರಿದು ಮಾತಾಡಿದ ಸಿಎಂ, ಸಚಿನ್ ಪಾಂಚಾಳ್ ಸಾವಿನ ಪ್ರಕರರಣದಲ್ಲಿ ಪ್ರಿಯಾಂಕ್ ಖರ್ಗೆಯ ಪಾತ್ರವಿಲ್ಲ, ಡೆತ್ ನೋಟಲ್ಲಿ ಅವರ ಹೆಸರಿನ ಉಲ್ಲೇಖವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ ಮತ್ತು ಅದಕ್ಕೂ ಮಿಗಿಲಾಗಿ ಅವರು ಯಾವುದೇ ತನಿಖೆಗೆ ತಯಾರಾಗಿರುವುದಾಗಿ ಹೇಳಿದ್ದಾರೆ, ಹಾಗಾಗಿ ಅವರು ರಾಜೀನಾಮೆ ಸಲ್ಲಿಸುವ ಪ್ರಮೇಯ ಉದ್ಭವಿಸಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಚಿನ್ ಪ್ರಕರಣದಲ್ಲಿ ಅಂತರರಾಜ್ಯ ಸುಪಾರಿ ಹಂತಕರ ಅಂಶ ಬೆಳಕಿಗೆ, ತನಿಖೆ ಸಿಬಿಐನಿಂದ ಆಗಬೇಕು: ನಾರಾಯಣಸ್ವಾಮಿ
Latest Videos