ಬಿಜೆಪಿ ಸಮಿತಿ ಕೇಳುವ ಎಲ್ಲ ದಾಖಲೆಗಳನ್ನು ಕೊಡಲು ಎಂಬಿ ಪಾಟೀಲ್ ಡಿಸಿಗೆ ಹೇಳಿದ್ದಾರೆ: ಜಮೀರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 30, 2024 | 12:04 PM

ಬಿಜೆಪಿ ನಾಯಕರ ಪ್ರತಿಭಟನೆ ಮಾಡೋದಾದರೆ ಮಾಡಲಿ, ಪಕ್ಷದ ಒಂದು ಸಮಿತಿ ರೈತರ ಸಮಸ್ಯೆ ಆಲಿಸಲು ಇವತ್ತು ವಿಜಯಪುರಕ್ಕೆ ಬರಲಿದೆ, ಅದರ ಸದಸ್ಯರು ಯಾವುದೇ ಕಾಗದಪತ್ರ ಕೇಳಿದರೂ ಕೊಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿದ್ದಾರೆ ಎಂದು ಜಮೀರ್ ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ವಕ್ಫ್ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ರಾಜ್ಯದ ಯಾವುದೇ ಜಿಲ್ಲೆಯ ರೈತನ ಜಮೀನಿಗೆ ತೊಂದರೆಯಾಗಲ್ಲ, ವಕ್ಫ್ ಜಮೀನು ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ, ರಾಜ್ಯದಲ್ಲಿ ಮೂರು ಉಪ ಚುನಾವಣೆಗಳಿವೆ ಮತ್ತು ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲು ವಿಷಯಗಳು ಇಲ್ಲದ ಕಾರಣ ಬಿಜೆಪಿ ನಾಯಕರು ರೈತರನ್ನು ಎತ್ತಿಕಟ್ಟುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರೈತರ ನೆಮ್ಮದಿ ಹಾಳು ಮಾಡಿದ ಜಮೀರ್ ಅಹ್ಮದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕ್ರಮ ಜರುಗಿಸಬೇಕು

Published on: Oct 30, 2024 12:04 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.