ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ, ಇವತ್ತು ಮುಖ್ಯಮಂತ್ರಿ ದೆಹಲಿಗೆ ಹೋಗುತ್ತಾರೆ: ಪರಮೇಶ್ವರ್
ಕ್ಯಾಬಿನೆಟ್ ಪುನಾರಚನೆ ನಡೆದಿದ್ದೇಯಾದಲ್ಲಿ ತನ್ನನ್ನು ಗೃಹಖಾತೆಯಿಂದ ಬದಲಾಯಿಸಿ ಬೇರೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಒಪ್ಪಿಕೊಳ್ಳುವುದಾಗಿ ಪರಮೇಶ್ವರ್ ಹೇಳಿದರು. ಕಳೆದ 35 ವರ್ಷಗಳಿಂದ ಪಕ್ಷಕ್ಕೆ ನಿಷ್ಠಾವಂತನಾಗಿ ಸೇವೆ ಸಲ್ಲಿಸುತ್ತಿದ್ದೇನೆ, ಮುಂದೆಯೂ ಅದನ್ನೇ ಮಾಡುವೆ ಎಂದು ಅವರು ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ಡಿಕೆ ಶಿವಕುಮಾರ್ ಯಾಕೆ ದೆಹಲಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಇವತ್ತು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಇರೋದ್ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗುತ್ತಿದ್ದಾರೆ, ಕಾರ್ಯಕಾರಿಣಿ ಸಭೆಗೆ ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ಕರೆಯುವುದು ವಾಡಿಕೆ, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯಬಹುದು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕ್ವೆಸ್ಟ್ ಅಕಾಡೆಮಿಯ ಕನ್ನಡ ಅನುವಾದವನ್ನು ಪರಮೇಶ್ವರ್ ಅವರಿಂದ ಕೇಳಿ ತಿಳಿದುಕೊಂಡ ಸಿದ್ದರಾಮಯ್ಯ
Latest Videos
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

