17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಕೈ ಶಾಸಕ ಪಾಟೀಲ್
ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಒಂದಲ್ಲ ಒಂದು ವಿಚಾರದಲ್ಲಿ ತಮ್ಮದೇ ಸರ್ಕಾರವನ್ನು ಮುಜುಗರಕ್ಕೀಡಾಗುವಂತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಹಸ್ತಕ್ಷೇಪ ಬಗ್ಗೆ ಸಿಎಂಗೆ ಪತ್ರ ಬರೆದು ಉಲ್ಲೇಖಿಸಿ ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ಏಕಾಏಕಿ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ರು. ಇದೀಗ ಮನೆ ಹಂಚಿಕೆಯಲ್ಲಿ ಲಂಚ ಬಗ್ಗೆ ಆಡಿಯೋವೊಂದನ್ನು ಹರಿಬಿಟ್ಟಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಸಂಬಂಧ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದಾದ ಒಂದೇ ದಿನದಲ್ಲಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಕಲಬುರಗಿ, (ಜೂನ್ 22): ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಒಂದಲ್ಲ ಒಂದು ವಿಚಾರದಲ್ಲಿ ತಮ್ಮದೇ ಸರ್ಕಾರವನ್ನು ಮುಜುಗರಕ್ಕೀಡಾಗುವಂತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಹಸ್ತಕ್ಷೇಪ ಬಗ್ಗೆ ಸಿಎಂಗೆ ಪತ್ರ ಬರೆದು ಉಲ್ಲೇಖಿಸಿ ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ಏಕಾಏಕಿ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ರು. ಇದೀಗ ಮನೆ ಹಂಚಿಕೆಯಲ್ಲಿ ಲಂಚ ಬಗ್ಗೆ ಆಡಿಯೋವೊಂದನ್ನು ಹರಿಬಿಟ್ಟಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಸಂಬಂಧ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದಾದ ಒಂದೇ ದಿನದಲ್ಲಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಕಲಬುರಗಿಯಲ್ಲಿಂದು ಮಾತನಾಡಿರುವ ಬಿ ಆರ್.ಪಾಟೀಲ್, ನನ್ನ ಕ್ಷೇತ್ರಕ್ಕೆ ಅಲ್ಪ ಸಂಖ್ಯಾತ ಇಲಾಖೆಯಿಂದ 17 ಕೋಟಿ ರೂ. ಬಂದಿದೆ. ಆದ್ರೆ ಆ ಬಗ್ಗೆ ನನಗೆ ಮಾಹಿತಿಯೇ ಇಲ್ಲ.ಅಲ್ಲಿ ಶಾಲೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಗುದ್ದಲಿ ಪೂಜೆಗೂ ನಂಗೆ ಕರೆದಿಲ್ಲ. ಮೌಲಾನಾ ಅಜಾದ್ ಶಾಲೆ ಕಟ್ಟಡ ಕಟ್ಟುತ್ತೆವೆ ಎಂದಿದ್ದಾರೆ. ಈಗಾಗಲೇ ಕೆಕೆಆರ್ ಡಿಬಿ ಅನುದಾನದಿಂದ ಕಾಮಗಾರಿ ಮಾಡಿದ್ದೆವು. ಯಾರ ಹಸ್ತಕ್ಷೇಪ ಅಂತ ಅಲ್ಲ. ಆದ್ರೆ ಶಾಸಕನಾಗಿ ನನಗೆ ಮಾಹಿತಿ ಇರಬೇಕಿತ್ತಲ್ವಾ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

