ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ

ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ.

Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2024 | 4:52 PM

ಬೆಂಗಳೂರು, (ನವೆಂಬರ್ 10): ಬೆಂಗಳೂರು ಎನ್ನುವ ಮಾಯಾನಗರಿಯಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ. ಹೌದು… ಇನ್ಸ್‌ಪೆಕ್ಟರ್ ಸಿದ್ದೇಗೌಡ ನಿವೃತ್ತಿ ಬಳಿಕ 6 ತಿಂಗಳಿಂದ ಗಂಗಮ್ಮನಗುಡಿ ಠಾಣೆಗೆ ಇನ್ಸ್‌ಪೆಕ್ಟರ್ ನೇಮಕವಾಗಿಲ್ಲ. ಇನ್ನು ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಹರಿಯಪ್ಪ ನಿವೃತ್ತಿಯಾಗಿದ್ದು, ಈ ಹುದ್ದೆ 3 ತಿಂಗಳಿನಿಂದ ಖಾಲಿ ಇದೆ. ಈ ಎರಡು ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್​ ಪ್ರಕರಣಗಳು ಹೆಚ್ಚು. ಆದರೂ ಸಹ ಗೃಹ ಇಲಾಖೆ ಇದುವರೆಗೂ ಇನ್ಸ್​ಪೆಕ್ಟರ್​ಗಳನ್ನು ನಿಯೋಜನೆ ಮಾಡಿಲ್ಲ.

ಆಸ್ತಿ ಕಲಹ ಸೇರಿದಂತೆ ಇತರೆ ಪ್ರಕರಣಗಳು ಈ ಠಾಣೆಗಳಿಗೆ ಬರುತ್ತವೆ. ಆದ್ರೆ, ಈ ಠಾಣೆಗಳ ಸಿಬ್ಬಂದಿ, ದೂರು ನೀಡಲು ಹೋದವರಿಗೆ ಇನ್ಸ್​ಪೆಕ್ಟರ್​ ಇಲ್ಲ ಎನ್ನುವ ಉಡಾಫೆ ಉತ್ತರ ನೀಡಿ ಕಳುಹಿಸುತ್ತಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿವೆ. ಇಂತಹ ದೊಡ್ಡ ಸಿಟಿಯಲ್ಲಿ ಆರು ತಿಂಗಳು ಗಟ್ಟಲೇ ಓರ್ವ ಇನ್ಸ್​ಪೆಕ್ಟರ್​ನ ನೇಮಕ ಮಾಡಿಲ್ಲ ಅಂದ್ರೆ ಕಾನೂನು ಸುವ್ಯವಸ್ಥೆ ಕಥೆ ಏನು?

ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ