‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ

Edited By:

Updated on: Mar 24, 2026 | 10:45 PM

ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಅವರು ಇತ್ತೀಚೆಗೆ ಬಿಡುಗಡೆ ಆದ ‘ಲವ್ ಮಾಕ್ಟೇಲ್ 3’ ಚಿತ್ರತಂಡದ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಚಿತ್ರತಂಡದಿಂದ ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರತಂಡದ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಚಿತ್ರತಂಡದಿಂದ ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ರಿಲೀಸ್ ಆದ ದಿನವೇ ಯಾಕೆ ಈ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾವುದೇ ಸಿನಿಮಾಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ತುಂಬಾ ಮುಖ್ಯ. ನಾನು ಡಾರ್ಲಿಂಗ್ ಕೃಷ್ಣ (Darling Krishna) ಅವರ ಉತ್ತಮ ಸ್ನೇಹಿತ. ಅವರ ಬಿಸ್ನೆಸ್ ಹಾಳು ಮಾಡುವ ಇಷ್ಟ ನನಗೆ ಇಲ್ಲ. ಪ್ರಚಾರಕ್ಕಾಗಿ ನಾವು ಇಲ್ಲಿಗೆ ಬಂದಿಲ್ಲ. ನನ್ನ ಕೋ-ರೈಟರ್ ರಾಘವೇಂದ್ರ ನಾಯ್ಕ್ ಅವರಿಗೆ ನ್ಯಾಯ ಸಿಗಬೇಕು ಎಂಬ ಕಾರಣಕ್ಕೆ ನಾವು ವಾಣಿಜ್ಯ ಮಂಡಳಿಗೆ ಬಂದಿದ್ದೇವೆ’ ಎಂದು ಗುರು ದೇಶಪಾಂಡೆ (Guru Deshpande) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More