ಹಾಸನ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದಾರೆ: ಸಿದ್ದರಾಮಯ್ಯ
ಫಲಾನುಭವಿಗಳ ಸಮಾವೇಶಗಳನ್ನು ಸಿದ್ದರಾಮಯ್ಯ ಚುನಾವಣಾ ಪ್ರಚಾರಕಕ್ಕಾಗಿ ಬಳಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಬೇಡಿ ಅಂತ ಹೆಚ್ ಡಿ ಕುಮಾರಸ್ವಾಮಿ ಹೇಳಿರುವುದಕ್ಕೂ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಾನು ಹಾಗೆ ಹೇಳಿರುವುದು ನಿಜ, ಜನರ ಪರ ಇರದವರನ್ನು ಸೋಲಿಸಿ ಅಂತ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಮರು ಸವಾಲು ಹಾಕಿದರು.
ಹಾಸನ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಲೋಕ ಸಭಾ ಚುನಾವಣೆಗಾಗಿ (Lok Sabha polls) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆ ಆದಷ್ಟು ಬೇಗ ಮಾಡಲಾಗುವುದೆಂದು ಹೇಳಿದರು. ಕಾಂಗ್ರೆಸ್ ಪಕ್ಷ ಚುನಾವಣೆಗೆ ಮೊದಲು ಘೋಷಿಸಿದ್ದ 5 ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶದಲ್ಲಿ (beneficiaries convention) ಭಾಗಿಯಾಗುವ ಮೊದಲು ಮಾತಾಡಿದ ಅವರು, ಹಾಸನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಅಂಥ ಗೊಂದಲಗಳೇನೂ ಇಲ್ಲ, ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿದ್ದಾರೆ ಹಾಗಾಗಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಅಸಲಿಗೆ, ಈ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷರೂ ಅಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರಿಸಬೇಕಿತ್ತು. ಪ್ರಶ್ನೆಯನ್ನು ಸಿದ್ದರಾಮಯ್ಯನವರಿಗೆ ಕೇಳಿದ್ದರಿಂದ ಅವರಲ್ಲಿ ಇರುಸು ಮುರುಸು ಉಂಟಾಗಿರುವ ಸಾಧ್ಯತೆ ಇಲ್ಲದಿಲ್ಲ. ಫಲಾನುಭವಿಗಳ ಸಮಾವೇಶಗಳನ್ನು ಸಿದ್ದರಾಮಯ್ಯ ಚುನಾವಣಾ ಪ್ರಚಾರಕಕ್ಕಾಗಿ ಬಳಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಬೇಡಿ ಅಂತ ಹೆಚ್ ಡಿ ಕುಮಾರಸ್ವಾಮಿ ಹೇಳಿರುವುದಕ್ಕೂ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಾನು ಹಾಗೆ ಹೇಳಿರುವುದು ನಿಜ, ಜನರ ಪರ ಇರದವರನ್ನು ಸೋಲಿಸಿ ಅಂತ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಮರು ಸವಾಲು ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲಿ ನಮ್ಮ ಅಭಿಪ್ರಾಯ ಕೇಳುತ್ತಾರೆ? ಶಾಮನೂರು ಶಿವಶಂಕರಪ್ಪ ಹೀಗೆನ್ನಲು ಕಾರಣ ಇಲ್ಲಿದೆ