ಸಿದ್ದರಾಮಯ್ಯ ಬಿಟ್ಟರೆ ಮುಖ್ಯಮಂತ್ರಿಯಾಗುವ ವರ್ಚಸ್ಸು ಯಾರಿಗೂ ಇಲ್ಲ: ವಾಟಾಳ್ ನಾಗರಾಜ್
ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದರೂ ಸಿದ್ದರಾಮಯ್ಯ ಯಾವುದೇ ಆಸ್ತಿ ಮಾಡಿಕೊಳ್ಳಲಿಲ್ಲ, ವಿರೋಧ ಪಕ್ಷದವರು ಯಾರದ್ದೋ ಮೂಲಕ ರಾಜ್ಯಪಾಲರಿಗೆ ದೂರು ಕೊಡಿಸಿದ್ದಾರೆ, ಸಿಎಂಗೆ ನೋಟೀಸ್ ಕೊಟ್ಟದಿನ ಎಲ್ಲರಿಗಿಂತ ಮೊದಲು ಪ್ರತಿಭಟನೆ ಮಾಡಿದ್ದು ತಾನೇ ಎಂದು ವಾಟಾಳ್ ನಾಗರಾಜ್ ಹೇಳಿದರು.
ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಸಮಿತಿಯು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಆಯೋಜಿಸಿದ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತಾಡಿದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಭರ್ಜರಿಯಾಗಿ ಬ್ಯಾಟ್ ಬೀಸಿದರು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಪ್ರಯತ್ನಗಳು ತಮ್ಮ ಗಮನಕ್ಕೆ ಬರುತ್ತಿವೆ ಹಾಗೇನಾದರೂ ಆದರೆ ರಾಜ್ಯದಲ್ಲಿ ಕ್ರಾಂತಿ ನಡೆಯಲಿದೆ ಎಂದು ನಾಗರಾಜ್ ಹೇಳಿದರು. ಅವರೊಂದಿಗಿನ ಸ್ನೇಹದ ಹಿನ್ನೆಲೆಯಲ್ಲಿ ಯಾವುದೇ ಮಾತನ್ನು ಹೇಳುತ್ತಿಲ್ಲ, ಆದರೆ ಅವರನ್ನು ಅಧಿಕಾರದಿಂದ ಇಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ ಮಾಡಿದಂತೆ ಎಂದು ನಾಗರಾಜ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಭಾಷಣದಲ್ಲೇ ಕೇಂದ್ರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
Latest Videos