ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ

Edited By:

Updated on: Feb 06, 2026 | 1:40 PM

ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾತನಾಡಿ, ತಂದೆ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಯಾವುದೇ ಸೂಚನೆ ನೀಡಿಲ್ಲ. ಮುಡಾ ಹಗರಣದ ಆರೋಪ ಸುಳ್ಳಾಗಿದ್ದು, ಲೋಕಾಯುಕ್ತದ ಬಿ ರಿಪೋರ್ಟ್ ಅಂಗೀಕಾರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೈಸೂರು, ಫೆಬ್ರವರಿ 6: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರು.

ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆದರೆ, ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಮುನ್ನಡೆಸಲಿದ್ದಾರೆ ಎಂದು ಯತೀಂದ್ರ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More