AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 01, 2026 | 12:33 PM

Share

ದಾವಣಗೆರೆಯಲ್ಲಿ ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ಅವರು ರಾಜ್ಯದಲ್ಲಿ ಎಲ್​ಪಿಜಿ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಖಾಸಗಿ ಏಜೆನ್ಸಿಗಳು ಹೆಚ್ಚು ದರ ವಿಧಿಸುತ್ತಿರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರವು ದರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು ಎಲ್​ಪಿಜಿ ದರವನ್ನು ಹೆಚ್ಚಿಸಿವೆ. ಈ ಸಂಬಂಧ ಪೆಟ್ರೋಲಿಯಂ ಸಚಿವರಿಗೆ ಮನವಿ ಮಾಡಿದ್ದು, ಖಾಸಗಿಯವರೂ ಸಹ ಸರ್ಕಾರ ನಿಗದಿಪಡಿಸಿದ ದರದಲ್ಲೇ ಎಲ್​ಪಿಜಿ ಪೂರೈಸಬೇಕು ಎಂದು ಮುನಿಯಪ್ಪ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More