BSY reacts; ಅಕ್ಕಿ ಹೊಂದಿಸಲು ಕಾಂಗ್ರೆಸ್ ಸರ್ಕಾರ ಏನಾದರೂ ಮಾಡಲಿ, ಅನ್ನಭಾಗ್ಯ ಸ್ಕೀಮ್ ಜಾರಿಗೊಳ್ಳಲೇಬೇಕು: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jun 19, 2023 | 10:22 AM

ಪ್ರಸ್ತುತವಾಗಿ ಜನರಿಗೆ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ, ಎಂದು ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ: ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗೊಂದಲ ಉಂಟುಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ, ಅಕ್ಕಿ ನೀಡುವ ಗ್ಯಾರಂಟಿ ಘೋಷಿಸುವಾಗ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಕಿ ನೀಡುವುದಾಗಿ ಹೇಳಿರಲಿಲ್ಲ. ಪ್ರಸ್ತುತವಾಗಿ ಜನರಿಗೆ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ. ಜನತೆಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆಯಾಗಿದೆ. ಅಕ್ಕಿ ಖರೀದಿ ಮಾಡಿಯಾದರೂ ತರಲಿ ಅಥವಾ ಏನಾದರೂ ಮಾಡಲಿ, ಅನ್ನಭಾಗ್ಯ ಯೋಜನೆಯನ್ನು ಅವರು ಜಾರಿಗೊಳಿಸಲೇಬೇಕು ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.