ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ? ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಿಷ್ಟು

ಗೃಹಲಕ್ಷ್ಮೀ ಯೋಜನೆಯ ಜೂನ್​ ತಿಂಗಳ ಹಣ ಇಂದು (ಸೆ.10) ಮಹಿಳೆಯರ ಖಾತೆಗೆ ಜಮೆಯಾಗಿದೆ. ಇನ್ನೆರಡು ತಿಂಗಳ ಹಣ ಬಾಕಿ ಇದೆ. ಮಹಿಳೆಯರ ಖಾತೆಗೆ ಸೇರಬೇಕಾಗಿದ್ದ ಹಣ ಮೂರು ತಿಂಗಳು ತಡವಾಗಿದ್ದು ಯಾಕೆ ಎಂಬ ಟಿವಿ9 ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಉತ್ತರಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ? ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಿಷ್ಟು
|

Updated on: Sep 10, 2024 | 1:39 PM

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮನೆಯ ಒಡತಿ ಕೈ ಸೇರಿರಲಿಲ್ಲ. ಇಂದು (ಸೆ.10) ಜೂನ್​ ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಇನ್ನೆರಡು ತಿಂಗಳ ಹಣ ಬಾಕಿ ಇದೆ. ಮಹಿಳೆಯರ ಖಾತೆಗೆ ಸೇರಬೇಕಾಗಿದ್ದ ಹಣ ಮೂರು ತಿಂಗಳು ತಡವಾಗಿದ್ದು ಯಾಕೆ ಎಂಬ ಟಿವಿ9 ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​, ಸರಿಯಾಗಿ ಆಯಾ ಕಂತಿನ ಹಣವನ್ನ ನಮ್ಮ ಇಲಾಖೆಗೆ ನೀಡಿದರೇ, ನಮಗೂ ಕೂಡ ಜನರಿಗೆ ಹಣ ಹಾಕಲು ಸಮಯ ಸಿಗುತ್ತೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಹಣ ಕೊಡುವುದಾಗಿ ಹೇಳಿದ್ದಾರೆ ಎಂದು ಹೇಳಿದರು. “ಈ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಸರ್ಕಾರದ ಬಳಿ ಹಣ ಇಲ್ಲ ಅಂತ ಪರೋಕ್ಷವಾಗಿ ಒಪ್ಪಿಕೊಂಡ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಜೂನ್ ತಿಂಗಳದ್ದು ಅಷ್ಟೇ ಹಣ ಹಾಕಿದ್ದೇವೆ. ಹಾಕೋ ಹಣವನ್ನ ಸರಿಯಾಗಿ ಹಾಕಬೇಕು. ತಾಂತ್ರಿಕ ದೋಷ ಆದಾಗ ಹೆಚ್ಚು ಕಡಿಮೆ ಆಗುತ್ತೆ. ಹಣ ಕೊಡುವುದೇ ನಿಜ, ಯಾವುದೇ ಕಾರಣಕ್ಕೂ ಯೋಜನೆ ನಿಲ್ಸುವುದಿಲ್ಲ ಅಂತ ಹೇಳಿದ್ದೇವೆ. ತಡ ಯಾಕೆ ಮಾಡಬೇಕು ಎಂಬುವುದು ನನ್ನ ಪ್ರಶ್ನೆ. ಹೀಗಾಗಿ ಆದಷ್ಟು ಬೇಗ ಹಣ ಬಿಡುಗಡೆ ಆಗುತ್ತೆ. ಜೂನ್ ತಿಂಗಳದ್ದು 80 ಸಾವಿರ ಜನರಿಗೆ ಹಣ ಬಂದಿರಲಿಲ್ಲ. ಅದು ಕೂಡ ಈಗಾಗಲೇ ಬಂದಿದೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದುಡ್ಡಿನ ಸಮಸ್ಯೆ ಕಾಡುತ್ತಿಲ್ಲ. ವಿರೋಧ ಪಕ್ಷಗಳು ತಮ್ಮ ಅಧಿಕಾರದ ಅವಧಿಯಲ್ಲಿ ಅವೈಜ್ಞಾನಿಕವಾಗಿ ಕೆಲಸಗಳಿಗೆ ಹಣ ಹಂಚಿದ್ದರಿಂದ, ಈಗ ಸಮಸ್ಯೆಯಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಸಾಕಷ್ಟು ಜನರಿಗೆ ಅನುಕೂಲ ಆಗಿದ್ದು ತುಂಬ ಖುಷಿ ಆಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ: ಆದರೂ ಮುಗಿಯದ ಗೋಳು!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!