ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳೊಂದಿಗೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಮತ್ತು ರಾಜ್ಯದ ಜನರ ಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನೀರಾವರಿ, ನಗರಾಭಿವೃದ್ಧಿ, ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರಕ್ಕೆ ಜಂಟಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 29: ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಬ್ರೇಕ್ಫಾಸ್ಟ್ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇನ್ನು ರಾಜಕಾರಣ ಇಲ್ಲ. ಏನಿದ್ರೂ ಜನರ ಸೇವೆ, ಆಡಳಿತ ಅಷ್ಟೇ. ಡಿನ್ನರ್ಗೆ ಸಿಎಂ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
