ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ
ಮಾರ್ಚ್-ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ವದಂತಿಗಳ ಕುರಿತು, ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಬೆಸ್ಕಾಂ KERCಗೆ ಯಾವುದೇ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿಲ್ಲ. 2024-25ರಲ್ಲಿ 2,800 ಕೋಟಿ ರೂ ಆದಾಯ ಕೊರತೆ ಎದುರಿಸಿದ್ದು, ನಷ್ಟ ಸರಿದೂಗಿಸಲು ಪರ್ಯಾಯ ವ್ಯವಸ್ಥೆ ಮನವಿ ಮಾಡಲಾಗಿದೆ. KERC ಸಾರ್ವಜನಿಕ ವಿಚಾರಣೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.
ಬೆಂಗಳೂರು, ಜನವರಿ 17: ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ನಾವು ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, 2025-26, 2026-27, 2027-28ರ ದರ ನಿಗದಿ ಆಗಿ ಹೋಗಿದೆ. 2024-25ರಲ್ಲಿ ಬೆಸ್ಕಾಂಗೆ 2,800 ಕೋಟಿ ರೂ ಆದಾಯ ಕೊರತೆ ಉಂಟಾಗಿತ್ತು. ಆ ವರ್ಷದಲ್ಲಿ ಆದಾಯ ಕೊರತೆಯ ಬಗ್ಗೆ KERC ಗಮನಕ್ಕೆ ತಂದಿದ್ದೇವೆ. ನಷ್ಟ ಸರಿದೂಗಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಸದ್ಯ 2024-25ನೇ ಆರ್ಥಿಕ ವರ್ಷದ ವರದಿಯನ್ನು KERCಗೆ ಸಲ್ಲಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 17, 2026 04:54 PM