ಸಿಎಂ ಡಿಕೆಶಿ ಸೂಚನೆಗೆ ಡೋಂಟ್ ಕೇರ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಖಾಲಿ ಖಾಲಿ

Edited By:

Updated on: Jun 22, 2026 | 3:41 PM

ಮಂಗಳೂರಿನಲ್ಲಿ ಕಚೇರಿಗಳಿಗೆ ಅದು ಅನ್ವಯವಾಗಿಲ್ಲ ಎನ್ನುವಂತಾಗಿದೆ. ಹೌದು.... ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ವಾರದ ಮೊದಲ ದಿನ ಸೋಮವಾರ ಅಧಿಕಾರಿಗಳ ಫುಲ್ ಹಾಜರಿ ಇಲ್ಲ. ಬೆಳಗ್ಗೆ 11 ಗಂಟೆ ಆಗಿದ್ದರೂ ಬಹಳಷ್ಟು ಅಧಿಕಾರಿಗಳು ಕರ್ತವ್ಯಕ್ಕೆ ಬಂದಿಲ್ಲ. ಈ ಬಗ್ಗೆ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನೆಡೆಸಿರೋ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ.

ಮಂಗಳೂರು, (ಜೂನ್ 22): ಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ (Shalini Rajneesh) ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಕಚೇರಿಗಳಿಗೆ ಅದು ಅನ್ವಯವಾಗಿಲ್ಲ ಎನ್ನುವಂತಾಗಿದೆ. ಹೌದು…. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ವಾರದ ಮೊದಲ ದಿನ ಸೋಮವಾರ ಅಧಿಕಾರಿಗಳ ಫುಲ್ ಹಾಜರಿ ಇಲ್ಲ. ಬೆಳಗ್ಗೆ 11 ಗಂಟೆ ಆಗಿದ್ದರೂ ಬಹಳಷ್ಟು ಅಧಿಕಾರಿಗಳು ಕರ್ತವ್ಯಕ್ಕೆ ಬಂದಿಲ್ಲ. ಈ ಬಗ್ಗೆ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನೆಡೆಸಿರೋ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 22, 2026 03:40 PM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More