ಸಿದ್ದರಾಮಯ್ಯ ಬದಲಾಯಿಸಲು ಗಟ್ಸ್ ಯಾರಿಗಿದೆ? ಗುಡುಗಿದ ಸಚಿವ ಜಮೀರ್

Updated on: Dec 11, 2025 | 3:46 PM

ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ಬಣದ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. 2028ರವರೆಗೂ ಸಿದ್ದರಾಮಯ್ಯನವರು ಸಿಎಂ ಅಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ. ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರುವುದು ಪಕ್ಷದ ಹೈಕಮಾಂಡ್​ಗೆ ಮಾತ್ರ ಎಂದು ಗುಡುಗಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆಶಿ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.

ಬೆಳಗಾವಿ, (ಡಿಸೆಂಬರ್ 11): ಸಿಎಂ-ಡಿಸಿಎಂ ನಡುವೆ ಬ್ರೇಕ್ ಫಾಸ್ಟ್​ ಮೀಟಿಂಗ್ ನಡೆದರೂ ಸಹ ಕಾಂಗ್ರೆಸ್ ಮನೆಯಲ್ಲಿ ಕುರ್ಚಿ ಕ್ರಾಂತಿಯ ಕಿಚ್ಚು ಮಾತ್ರ ಆರಿಲ್ಲ. ಎಲ್ಲವೂ ಕೂಲ್ ಆಯ್ತು ಎನ್ನುವಾಗಲೇ ಮತ್ತೆ ಸಿಎಂ ಪುತ್ರ ಯತೀಂದ್ರ ಪವರ್ ಶೇರಿಂಗ್ ವಿಚಾರವಾಗಿ ಮಾತನಾಡಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕೂಡ ಸ್ಪಷ್ಟವಾಗಿ ಹೇಳಿದೆ ಅಂತಾ ಯತೀಂದ್ರ ಪುನರುಚ್ಛರಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್​​​ನಲ್ಲಿ ಸಂಚಲನ ಸೃಷ್ಟಿಸಿದ್ದು, ಡಿಕೆ ಶಿವಕುಮಾರ್ ಆಪ್ತ ಬಣದ ಕಣ್ಣು ಕೆಂಪಾಗಿಸಿದೆ.

ಇನ್ನು ಇದೇ ವಿಚಾರವಾಗಿ ಸಿಎಂ ಬಣದ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. 2028ರವರೆಗೂ ಸಿದ್ದರಾಮಯ್ಯನವರು ಸಿಎಂ ಅಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ. ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರುವುದು ಪಕ್ಷದ ಹೈಕಮಾಂಡ್​ಗೆ ಮಾತ್ರ ಎಂದು ಗುಡುಗಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆಶಿ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ. ಇದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ