ಬಂಡಿಸಿದ್ದೇಗೌಡ ಕಾಮೆಂಟ್; ವ್ಯಕ್ತಿಯೊಬ್ಬರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಕೂಡದು: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 30, 2024 | 1:26 PM

ಮಾತಾಡುವಾಗ ನಮ್ಮ ನಾಲಗೆ ಮೇಲೆ ಹಿಡಿತವಿರಬೇಕು, ಬೇರೆಯವರು ಬೇರೆ ಬೇರೆ ವಿಚಾರಗಳ ಬಗ್ಗೆ ಮಾತಾಡುತ್ತಾರೆ, ಅದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಏನೇನೋ ಮಾತಾಡುವುದು ಸರಿಯಲ್ಲ, ಅದು ಬೇರೆ ಪಕ್ಷದ ನಾಯಕನ ಅರೋಗ್ಯದ ವಿಷಯವಾಗಿರಬಹುದು, ಅಥವಾ ಮತ್ತೇನೋ ಖಾಸಗಿ ವಿಷಯ ಆಗಿರಬಹುದು, ಅದನ್ನು ಸಾರ್ವಜನಿಕವಾಗಿ ಚರ್ಚಿಸುವ ಪ್ರಯತ್ನಕ್ಕೆ ಯಾವತ್ತೂ ಕೈಹಾಕಬಾರದೆಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ ಬಂಡಿಸಿದ್ದೇಗೌಡ (Ramesh Bandisiddegowda) ಜಿಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಹಾರ್ಟ್ ಆಪರೇಶನ್ ಬಗ್ಗೆ ಹಗುರವಾಗಿ ಮಾತಾಡಿದ್ದು ಖುದ್ದು ಅವರ ಪಕ್ಷದ ನಾಯಕರನ್ನೇ ಕೆರಳಿಸಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರು; ಯಾವುದೇ ಪಕ್ಷದವರಾಗಿಲಿ, ರಾಜಕಾರಣದಲ್ಲಿ ಯಾವತ್ತೂ ವೈಯಕ್ತಿಕ ಟೀಕೆಗಳನ್ನು ಮಾಡಬಾರದು ಎಂದು ಹೇಳಿದರು. ಮಾತಾಡುವಾಗ ನಮ್ಮ ನಾಲಗೆ ಮೇಲೆ ಹಿಡಿತವಿರಬೇಕು, ಬೇರೆಯವರು ಬೇರೆ ಬೇರೆ ವಿಚಾರಗಳ ಬಗ್ಗೆ ಮಾತಾಡುತ್ತಾರೆ, ಅದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಏನೇನೋ ಮಾತಾಡುವುದು ಸರಿಯಲ್ಲ, ಅದು ಬೇರೆ ಪಕ್ಷದ ನಾಯಕನ ಅರೋಗ್ಯದ ವಿಷಯವಾಗಿರಬಹುದು, ಅಥವಾ ಮತ್ತೇನೋ ಖಾಸಗಿ ವಿಷಯ ಆಗಿರಬಹುದು, ಅದನ್ನು ಸಾರ್ವಜನಿಕವಾಗಿ ಚರ್ಚಿಸುವ ಪ್ರಯತ್ನಕ್ಕೆ ಯಾವತ್ತೂ ಕೈಹಾಕಬಾರದೆಂದು ಪರಮೇಶ್ವರ್ ಹೇಳಿದರು. ಮಳವಳ್ಳಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತಾಡುವಾಗ ಬಂಡಿಸಿದ್ದೇಗೌಡ, ಚುನಾವಣಾ ಸಮಯದಲ್ಲೇ ಕುಮಾರಸ್ವಾಮಿಯವರ ಆರೋಗ್ಯ ಯಾಕೆ ಹದಗೆಡುತ್ತದೆ? ಹೃದಯ ಶಸ್ತ್ರಚಿಕಿತ್ಸೆಗೊಳಗಾದವರು ಅದು ಹೇಗೆ ಆಪರೇಶನ್ ಆದ ಕೇವಲ ಮೂರು ದಿನಗಳ ನಂತರ ಎದ್ದು ಓಡಾಡುವುದು ಸಾಧ್ಯ ಎಂದು ಪ್ರಶ್ನಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:  ಚುನಾವಣೆ ಬಂದ್ರೆ ಸಾಕು ಕುಮಾರಸ್ವಾಮಿ ಹಾರ್ಟ್​​ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಾರೆ: ವ್ಯಂಗ್ಯವಾಡಿದ ಕಾಂಗ್ರೆಸ್​ ಶಾಸಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.