ತಪ್ಪಿತಸ್ಥರು ಯಾರೇ ಆದರೂ ಬಿಡುವುದಿಲ್ಲ; ಸತಾರಾ ವೈದ್ಯೆಯ ಆತ್ಮಹತ್ಯೆ ಕುರಿತು ಸಿಎಂ ಫಡ್ನವೀಸ್ ಭರವಸೆ

Updated on: Oct 25, 2025 | 7:44 PM

ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಮಹಾರಾಷ್ಟ್ರದ ಯುವ ವೈದ್ಯೆಯ ಆತ್ಮಹತ್ಯೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ದುಃಖ ವ್ಯಕ್ತಪಡಿಸಿದ್ದಾರೆ. ಈ ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮುಂಬೈ, ಅಕ್ಟೋಬರ್ 25: “ಸರ್ಕಾರಿ ಆಸ್ಪತ್ರೆಯ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ (Maharashtra Doctor Death) ಮಾಡಿಕೊಳ್ಳುವ ಮೊದಲು ಲೈಂಗಿಕ ದೌರ್ಜನ್ಯ ಎಸಗಿರುವುದು ಬಹಳ ಗಂಭೀರ ವಿಷಯ. ಇದು ನಮಗೆಲ್ಲರಿಗೂ ಅತ್ಯಂತ ದುಃಖಕರ ಸಂಗತಿಯಾಗಿದೆ“ ಎಂದು ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. “ಸರ್ಕಾರ ನಿನ್ನೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಿತು. ಬಂಧನಗಳು ಸಹ ಪ್ರಾರಂಭವಾಗಿವೆ. ತಪ್ಪಿತಸ್ಥರು ಯಾರೇ ಆದರೂ ಅವರನ್ನು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಯುವ ವೈದ್ಯೆಯೊಬ್ಬರು ತಮ್ಮ ಅಂಗೈಯಲ್ಲಿ ಸೂಸೈಡ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ನಂತರ ಸಿಎಂ ದೇವೇಂದ್ರ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ. ಆಕೆ ಆರೋಪಿಸಿದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಮತ್ತು ಟೆಕ್ಕಿ ಕಳೆದ ಐದು ತಿಂಗಳಿನಿಂದ ಆಕೆಯ ಮೇಲೆ ಅತ್ಯಾಚಾರ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ