ಹೋರಾಟ ಮಾಡಲು ವಿಜಯೇಂದ್ರಗೆ ಏನೂ ಉಳಿದಿಲ್ಲ, ನಾವು ಈಗಾಗಲೇ ವರದಿ ಕೂಡ ಸಲ್ಲಿಸಿದ್ದೇವೆ: ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 04, 2024 | 1:08 PM

ಯತ್ನಾಳ್​​ಗೆ ರಾಜ್ಯದಲ್ಲಿ ಪ್ರಾಮುಖ್ಯತೆ ಹೆಚ್ಚಾಗುತ್ತದೆ ಎಂಬ ಭೀತಿಯಿಂದ ವಿಜಯೇಂದ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಹೋರಾಟಕ್ಕಿಳಿದಿರುವಂತಿದೆ ಅಂತ ಹೇಳಿದಾಗ ಸ್ವಲ್ಪ ಮೃದು ಧಾಟಿಯಲ್ಲಿ ಮಾತಾಡಿದ ಯತ್ನಾಳ್, ಏನಾದರೂ ಮಾಡಿಕೊಳ್ಳಲಿ, ಆದರೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ ಸಾಕು ಎಂದರು.

ದೆಹಲಿ: ತನ್ನ ವಿರುದ್ಧ ಶೋಕಾಸ್ ನೋಟೀಸ್ ಜಾರಿಮಾಡಿದರೂ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಎರಡು-ಮೂರು ದಿನಗಳಿಂದ ದೆಹಲಿಯಲ್ಲಿರುವ ಅವರು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ಪಕ್ಷದ ರಾಜ್ಯಾಧ್ಯಕ್ಷರಿಗೆ ಈಗ ಜ್ಞಾನೋದಯವಾದಂತಿದೆ, ಇವತ್ತು ಅವರು ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಮತ್ತು ಬೀದರ್​ನಲ್ಲಿ ರೈತರನ್ನು ಭೇಟಿಯಾಗುತ್ತಿದ್ದಾರೆ, ಪ್ರಾಯಶಃ ವಕ್ಫ್ ವಿರುದ್ಧ ಇದು ಅವರ ಮೊದಲ ಹೋರಾಟವಿರಬಹುದು, ಅದರೆ ಈಗ ಹೋರಾಟ ಮಾಡವಂದಥದ್ದು ಏನೂ ಇಲ್ಲ, ತಮ್ಮ ತಂಡ ರೈತರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ದಾಖಲಿಸಿಕೊಂಡು ದಾಖಲೆ ಸಮೇತ ವರದಿಯನ್ನು ಜೆಪಿಸಿಗೆ ನೀಡಿದೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೆಹಲಿಯಲ್ಲಿ ಯತ್ನಾಳ್ ತಂಡ ರಹಸ್ಯ ಸಭೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.